Homeರಾಜ್ಯರೌಡಿ ಪಟ್ಟಿಯಿಂದ ಏಳು ಮಂದಿ ಕೈಬಿಟ್ಟ ಕುರಿತು ಕಾನೂನು ತಜ್ಞರೊಂದಿಗೆ ಚರ್ಚೆ : ಸೀಮಂತ್‌ಕುಮಾರ್‌ ಸಿಂಗ್‌

ರೌಡಿ ಪಟ್ಟಿಯಿಂದ ಏಳು ಮಂದಿ ಕೈಬಿಟ್ಟ ಕುರಿತು ಕಾನೂನು ತಜ್ಞರೊಂದಿಗೆ ಚರ್ಚೆ : ಸೀಮಂತ್‌ಕುಮಾರ್‌ ಸಿಂಗ್‌

ನಗರದ ಏಳು ಮಂದಿಯನ್ನು ರೌಡಿ ಪಟ್ಟಿಯಿಂದ ಕೈಬಿಡಲಾಗಿದೆ. ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ತಿಳಿಸಿದರು.

ಬೆಂಗಳೂರು,ಜೂ.16- ನಗರದ ಏಳು ಮಂದಿಯನ್ನು ರೌಡಿ ಪಟ್ಟಿಯಿಂದ ಕೈಬಿಡಲಾಗಿದೆ. ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ರಾಜ್ಯದ ಪೊಲೀಸ್‌ ಮಹಾ ನಿರ್ದೇಶಕರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.ಏಳು ರೌಡಿ ಶೀಟರ್‌ಗಳನ್ನು ಯಾವ ಕಾರಣಕ್ಕೆ ಕೈಬಿಡಲಾಗಿದೆ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಪೊಲೀಸ್‌ ಇಲಾಖೆಯಿಂದ ಕರ್ತವ್ಯ ಲೋಪ ಆಗಿದೆಯೇ ಎಂಬುವುದನ್ನು ತನಿಖೆ ಮಾಡಲಾಗುತ್ತದೆ.

ರೌಡಿ ಶೀಟರ್‌ಗಳ ಹೆಸರನ್ನು ಪಟ್ಟಿಯಿಂದ ಕೈಬಿಟ್ಟಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದರು.ನಗರದಲ್ಲಿ ರೌಡಿಗಳ ಚಟುವಟಿಕೆಗಳು ನಿಯಂತ್ರಣದಲ್ಲಿದೆ. ರೌಡಿಗಳು ಬಾಲ ಬಿಚ್ಚದಂತೆ ಕಠಿಣ ಕ್ರಮ ಕೈಗೊಂಡಿದ್ದೇವೆ, ಅವರುಗಳ ಮೇಲೆ ಸದಾ ಹದ್ದಿನ ಕಣ್ಣಿಟ್ಟಿದ್ದೇವೆ ಎಂದು ಅವರು ಹೇಳಿದರು.

ಡ್ರಗ್‌್ಸ ನಿಯಂತ್ರಣದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಾದಕ ವಸ್ತು ಸಾಗಾಣೆ ಹಾಗೂ ಮಾರಾಟದ ಮೇಲೆ ನಿಗಾ ವಹಿಸಲಾಗಿದೆ. ಅವುಗಳ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಯುತ್ತಿರುತ್ತದೆ ಎಂದರು.

ಕಾಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣ ಸೂಕ್ಮ ವಿಚಾರವಾಗಿದೆ. ಬೇರೆ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅದರ ವರದಿ ಬಂದ ನಂತರ ಇನ್ನಷ್ಟು ಮಾಹಿತಿಗಳು ಲಭ್ಯವಾಗಲಿವೆ ಎಂದು ಆಯುಕ್ತರು ತಿಳಿಸಿದರು.

RELATED ARTICLES

Latest News