Sunday, December 14, 2025
Homeರಾಜ್ಯಚರ್ಚೆಗೆ ಗ್ರಾಸವಾಗಿದೆ ದೆಹಲಿಯಲ್ಲಿ ಡಿಕೆಶಿ ಎಐಸಿಸಿ ಹಿರಿಯ ನಾಯಕರನ್ನು ಭೇಟಿ

ಚರ್ಚೆಗೆ ಗ್ರಾಸವಾಗಿದೆ ದೆಹಲಿಯಲ್ಲಿ ಡಿಕೆಶಿ ಎಐಸಿಸಿ ಹಿರಿಯ ನಾಯಕರನ್ನು ಭೇಟಿ

DK Shivakumar meets senior AICC leaders in Delhi

ದೆಹಲಿ, ಡಿ.14- ಅಧಿಕಾರ ಹಂಚಿಕೆಯ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ದೆಹಲಿಯಲ್ಲಿ ಎಐಸಿಸಿ ಹಿರಿಯ ನಾಯಕರನ್ನು ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.ದೆಹಲಿಯಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರಮುಖರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೋಜನ ವ್ಯವಸ್ಥೆ ಮಾಡಿದ್ದರು. ಅದರಲ್ಲಿ ಆಯ್ದ ನಾಯಕರಿಗೆ ಮಾತ್ರ ಬೋಜನ ಕೂಟಕ್ಕೆ ಆಹ್ವಾನ ನೀಡಲಾಗಿತ್ತು.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಬಿ.ಕೆ.ಹರಿಪ್ರಸಾದ್‌ ಅವರಿಗೂ ಆಹ್ವಾನ ಇತ್ತು. ಸಿದ್ದರಾಮಯ್ಯ ಅವರು ತಡವಾಗಿ ದೆಹಲಿಗೆ ಆಗಮಿಸಿದ್ದರು. ಡಿ.ಕೆ. ಶಿವಕುಮಾರ್‌ ನಿನ್ನೆಯೇ ದೆಹಲಿಗೆ ಆಗಮಿಸಿ, ತಮ್ಮ ರಾಜಕೀಯ ಚಟುವಟಿಕೆಗಳನ್ನು ಆರಂಭಿಸಿದ್ರು.

ಕರ್ನಾಟಕ ಭವನದಲ್ಲಿ ಹಲವಾರು ಶಾಸಕರು, ಸಚಿವರು ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಔತಣ ಕೂಟದಲ್ಲಿ ಭಾಗವಹಿಸಿದ್ದ ಡಿ.ಕೆ.ಶಿವಕುಮಾರ್‌ ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌‍ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದರು. ಈ ವೇಳೆ ಡಿಕೆ ಶಿವಕುಮಾರ್‌ ತಮ ಪರವಾದ ವಾದವನ್ನು ವರಿಷ್ಠರಿಗೆ ತಲುಪಿಸಿದ್ದಾರೆ ಎಂದು ಮೂಲಗಳು ತಿಳಿಸುವೆ.

ಕರ್ನಾಟಕದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಗಳು ಭಾರಿ ಸದ್ದು ಮಾಡಿವೆ. ಡಿ.ಕೆ.ಶಿವಕುಮಾರ್‌ ಅವರ ಆಪ್ತ ಶಾಸಕರಾಗಿರುವ ರಾಮನಗರದ ಇಕ್ಬಾಲ್‌ ಹುಸೇನ್‌ ಜನವರಿ 6 ಅಥವಾ 9ರಂದು ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರರು ಆಗಿರುವ ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಸಿದ್ದರಾಮಯ್ಯ ಅವರೇ 5 ವರ್ಷ ಅಧಿಕಾರ ಪೂರ್ಣಗೊಳಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದು ಬಾರಿ ಚರ್ಚೆಗೂ ಗ್ರಾಸವಾಗಿದೆ.

ಕಳೆದ ತಿಂಗಳು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರ ನಡುವೆ ಅಧಿಕಾರ ಹಂಚಿಕೆಯ ಸಂಬಂಧಪಟ್ಟಂತೆ ಬಾರಿ ಚರ್ಚೆಗಳು ನಡೆಯುತ್ತಿದ್ದವು. ಪರಿಸ್ಥಿತಿ ವಿಪರೀತಕ್ಕೆ ತಲುಪಿದರಿಂದಾಗಿ ಹೈಕಮಾಂಡ್‌ ನಾಯಕರು ಮಧ್ಯ ಪ್ರವೇಶ ಮಾಡಿ ಸೂಚನೆ ನೀಡಿದ್ದರು. ಅದರಂತೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಎರಡು ಉಪಹಾರ ಕೂಟಗಳು ನಡೆದವು.

ನಂತರ ನಾಯಕರ ನಡುವೆ ತಾತ್ಕಾಲಿಕ ಕದನ ವಿರಾಮ ಘೋಷಣೆಯಾಗಿದೆ. ಆದರೆ ನಾಯಕರು ಮತ್ತು ಶಾಸಕರ ನಡುವೆ ಅಧಿಕಾರ ಹಂಚಿಕೆ ವಿವಾದ ತೀವ್ರ ಸ್ವರೂಪದಲ್ಲಿ ನಡೆಯುತ್ತಲೇ ಇದೆ. ಮತಗಳ್ಳತನದ ವಿರುದ್ಧ ಮಧ್ಯಾಹ್ನ 2 ಗಂಟೆಗೆ ಪ್ರತಿಭಟನೆ ನಿಗದಿಯಾಗಿತ್ತು. ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಪ್ರತಿಭಟನೆಗೂ ಮುನ್ನಾ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಅಭಿಪ್ರಾಯ ತಿಳಿಸದ ಹೈಕಮಾಂಡ್‌, ಅಧಿಕಾರ ಹಂಚಿಕೆಯ ಕುರಿತಂತೆ ಚರ್ಚೆ ನಡೆಸಲು ಮತ್ತೊಂದು ದಿನ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

RELATED ARTICLES

Latest News