Homeರಾಜ್ಯಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ದೀಪಾವಳಿ ಶುಭಾಷಯ ತಿಳಿಸಿದ ಡಿಕೆಶಿ

ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ದೀಪಾವಳಿ ಶುಭಾಷಯ ತಿಳಿಸಿದ ಡಿಕೆಶಿ

ಬೆಂಗಳೂರು, ನ.9- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಷಯ ತಿಳಿಸಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಅವರು, ಈ ಸಂದರ್ಭದಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೂಡ ಚರ್ಚೆ ನಡೆಸಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭಕ್ಕೆ ನಿಗಮ ಮಂಡಳಿಗಳ ನೇಮಕಾತಿ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರ ಪಟ್ಟಿಗಳು ಪ್ರತ್ಯೇಕವಾಗಿದ್ದರಿಂದಾಗಿ ನೇಮಕಾತಿಗಳು ನೆನೆಗುದಿಗೆ ಬಿದ್ದಿವೆ. ಇಂದಿನ ಭೇಟಿಯಲ್ಲಿ ಆ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.

ವಿಧಾನ ಪರಿಷತ್ತಿನ 5 ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಕುರಿತಂತೆಯೂ ಡಿ.ಕೆ.ಶಿವಕುಮಾರ್‌ ಮಾಹಿತಿ ವಿನಿಮಯ ಮಾಡಿಕೊಂಡಿದ್ದಾರೆ. ಸ್ಟಿಂಗ್‌ ಆಪರೇಷನ್‌ ವಿವಾದ ತೀವ್ರಗೊಂಡ ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಮೈಸೂರಿನಲ್ಲಿ ಒಮೆ ಭೇಟಿಯಾಗಿದ್ದನ್ನು ಹೊರತು ಪಡಿಸಿದರೆ ಪರಸ್ಪರ ಎಲ್ಲಿಯೂ ಸಂಧಿಸಿರಲಿಲ್ಲ.

ದೀಪಾವಳಿಯ ಹಬ್ಬದ ಸಂದರ್ಭದಲ್ಲಿ ಶುಭಾಷಯ ವಿನಿಮಯ ಮಾಡಿಕೊಳ್ಳುವ ನೆಪದಲ್ಲಿ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಹಲವಾರು ಮಹತ್ವದ ವಿಚಾರಗಳು ಮುನ್ನೆಲೆಗೆ ಬಂದಿವೆ. ಅವುಗಳ ಬಗ್ಗೆ ಇಬ್ಬರೂ ನಾಯಕರು ಔಪಚಾರಿಕ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

RELATED ARTICLES

Latest News