ಬೆಂಗಳೂರು,ಫೆ.26- ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ಮೇಲೆ ನಿರ್ದಾಕ್ಷ್ಯಣ್ಯವಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ಕೊಟ್ಟಿದ್ದರೂ ಕಿಡಿಗೇಡಿಗಳು ಮತ್ತೆ ದ್ವಿತೀಯ ಪಿಯುಸಿ
ಪತ್ರಿಕೆ ಬೇಕೇ? ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಪ್ಟೋ್ ಮಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಆತಂಕಕ್ಕೀಡು ಮಾಡಿದೆ.
100 ರೂಪಾಯಿ ಕೊಟ್ಟರೆ ಸಾಕು ದ್ವಿತೀಯ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಕೊಡುವುದಾಗಿ ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಸಮೇತ ಪೋಸ್ಟ್‌ಗಳನ್ನ ಹರಿಬಿಟ್ಟಿದ್ದಾರೆ.
ಡೆಲ್ಟಾ ಕನ್ನಡಿಗ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪ್ಟೋ್ ಮಾಡಿದ್ದಾನೆ. ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದರೆ ಮೆಸೇಜ್ ಮಾಡಿ. ಅಮೌಂಟ್ ಎಷ್ಟು ಅಂತ ಆಮೇಲೆ ಹೇಳ್ತಿನಿ ಎಂದು ಈ ಕಿಡಿಗೇಡಿ ಬರೆದುಕೊಂಡಿದ್ದಾನೆ.
ಸ್ಪಷ್ಟನೆ:ಇದರ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಸ್‌ಇಎಬಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ.ಇದರ ಬಗ್ಗೆ ಶಿಕ್ಷಣ ಇಲಾಖೆಗೆ ಯಾವುದೇ ಭಯವೂ ಇಲ್ಲ. ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸತತ ಪ್ಟೋ್ ಬರುತ್ತಿದೆ. ಇದೆಲ್ಲಾ ಸುಳ್ಳು ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ:
ಪರೀಕ್ಷೆಯ ಸಮಯದಲ್ಲಿ ಇಂತಹ ಕಿಡಿಗೇಡಿಗಳು ಹಣ ಮಾಡುವ ಉದ್ದೇಶದಿಂದ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಅಥವಾ ನಕಲಿ ಪತ್ರಿಕೆಗಳನ್ನು ನೀಡಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಸಾಧ್ಯತೆ ಹೆಚ್ಚು. ಇಂತಹ ಜಾಲಗಳಿಗೆ ಸಿಲುಕಿ ಹಣ ಕಳೆದುಕೊಳ್ಳಬೇಡಿ ಮತ್ತು ನಿಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಗೊಂದಲ ಮೂಡಿಸುತ್ತಿರುವ ಸೋಶಿಯಲ್ ಮೀಡಿಯಾ ಅಕೌಂಟ್ ಪರಿಶೀಲನೆಗೆ ಪರೀಕ್ಷಾ ಮಂಡಳಿ ಮುಂದಾಗಿದೆ. ಈ ಕುರಿತು ಸೈಬರ್ ಪೊಲೀಸರಿಗೆ ದೂರು ನೀಡಲು ಪರೀಕ್ಷಾ ಮಂಡಳಿ ಮುಂದಾಗಿದೆ.
ಫೆ. 28ರಿಂದ ಮಾ. 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದೆ. ಈ ಬಾರಿ ದ್ವಿತೀಯ ಪಿಯು ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಆಗಿದೆ. ಒಟ್ಟು 1217 ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪ್ರತಿ ಕೇಂದ್ರದಲ್ಲೂ ವೆಬ್ ಕಾಸ್ಟಿಂಗ್ ಕಡ್ಡಾಯ ಮಾಡಲಾಗಿದೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಅಧಿಕಾರಿಗಳಿಗೆ ದೊಡ್ಡ ಆಘಾತ ನೀಡಿತ್ತು. ಶಿವಮೊಗ್ಗದ ಕಾಲೇಜುಗಳಿಗೆ ನೀಡಲಾಗಿದ್ದ ಪ್ರಶ್ನೆ ಪತ್ರಿಕೆಯ ಪ್ರತಿಯು ಪರೀಕ್ಷೆ ಆರಂಭವಾಗುವ ಮೊದಲೇ ವಾಟ್ಸಾಪ್ ಮೂಲಕ ಹರಿದಾಡಿತ್ತು.
ಶಿವಮೊಗ್ಗದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕಾಲೇಜುಗಳಿಗೆ ಭೇಟಿ ನೀಡಿದಾಗ ಈ ವಿಚಾರ ಗೊತ್ತಾಗಿದೆ. ಶಿವಮೊಗ್ಗ ಜಿಲ್ಲೆಯ ಕೋಡ್ ಹೊಂದಿದ್ದ ಪ್ರಶ್ನೆ ಪತ್ರಿಕೆಯು ತುಮಕೂರು ಜಿಲ್ಲೆಯಲ್ಲೂ ಚಲಾವಣೆಯಲ್ಲಿರುವುದು ಕಂಡುಬಂದಿದೆ. ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಲಾಗಿದೆ.
