ಬೆಂಗಳೂರು,ಮಾ.14-ಡ್ರಗ್ಸ್ ಮುಕ್ತ ಕಾರಾಗೃಹ ನಿರ್ಮಾಣ ಮಾಡುವ ಉದ್ದೇಶದಿಂದ ಖೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸುವಂತೆ ಡಿಜಿಪಿ ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜೈಲು ಸಿಬ್ಬಂದಿಯಿಂದಲೂ ಮಾದಕ ವಸ್ತುಗಳು ಕಾರಾಗೃಹದೊಳಗೆ ಸಾಗಾಟವಾಗಿರುವ ಘಟನೆಗಳ ಹಿನ್ನೆಲೆಯಲ್ಲಿ ನಿಮಾನ್‌್ಸ ಆಸ್ಪತ್ರೆ ಸಹಯೋಗದೊಂದಿಗೆ ಖೈದಿಗಳಿಗೆ ಡ್ರಗ್‌್ಸ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ.
ರಾಜ್ಯಾದ್ಯಂತ ಇರುವ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ತಡೆಯಲು ಮಹತ್ವದ ಕ್ರಮ ಕೈಗೊಂಡಿರುವ ಅಲೋಕ್‌ಕುಮಾರ್ ಅವರ ಸೂಚನೆಯಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಖೈದಿಗಳನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಮೊದಲ ಹಂತದಲ್ಲಿ ಈ ಯೋಜನೆಯಡಿ ಎಲ್ಲಾ ಜೈಲುಗಳಲ್ಲಿ ಸುಮಾರು ಶೇ.10 ರಷ್ಟು ಖೈದಿಗಳಿಗೆ ಗಾಂಜಾ, ಹೆರೊಹಿನ್, ಕೊಕೈನ್ ಸೇರಿದಂತೆ ವಿವಿಧ ಮಾದಕ ವಸ್ತುಗಳ ಪರೀಕ್ಷೆಗಳನ್ನು ಕಾರಾಗೃಹ ಇಲಾಖೆ ನೀಡಿರುವ ವಿಶೇಷ ಕಿಟ್‌ಗಳ ಮೂಲಕ ನಡೆಸಲಾಗುತ್ತಿದೆ.
ಒಂದು ವೇಳೆ ಈ ಪರೀಕ್ಷೆಯಲ್ಲಿ ಖೈದಿಗಳು ಮಾದಕ ವಸ್ತು ಸೇವಿಸಿರುವುದು ಪತ್ತೆಯಾದಲ್ಲಿ ತಕ್ಷಣ ಅವರಿಗೆ ಕೌನ್ಸೆಲಿಂಗ್ ನೀಡಲಾಗುತ್ತದೆ.
ಮಾದಕ ವಸ್ತು ಸೇವನೆ ಚಟಕ್ಕೆ ಒಳಗಾಗಿರುವ ಖೈದಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.ಒಟ್ಟಾರೆ ಕೌನ್ಸಿಲಿಂಗ್ ಮತ್ತು ಚಿಕಿತ್ಸೆ ಮೂಲಕ ಖೈದಿಗಳನ್ನು ಸರಿ ದಾರಿಗೆ ತರಲು ಡಿಜಿಪಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
