Homeರಾಜ್ಯಕರವೇ ನಾರಾಯಣಗೌಡರಿಂದ ದಸರಾ ಉದ್ಘಾಟನೆ ಮಾಡಿಸಿ : ಅಭಿಮಾನಿಗಳ ಮನವಿ

ಕರವೇ ನಾರಾಯಣಗೌಡರಿಂದ ದಸರಾ ಉದ್ಘಾಟನೆ ಮಾಡಿಸಿ : ಅಭಿಮಾನಿಗಳ ಮನವಿ

ಬೆಂಗಳೂರು, ಸೆ.23- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರಿಂದ ಉದ್ಘಾಟನೆ ಮಾಡಿಸಬೇಕು ಎಂದು ಮಲ್ಟಿಸ್ಟಾರ್‌ ಶಿವರಾಜ್‌ ಕುಮಾರ್‌ ಅಭಿಮಾನಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕೆ. ಚಂದ್ರಶೇಖರ್‌ (ಚನ್ನ) ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು, ಕನ್ನಡ ನಾಡಿಗೆ ಯಾವುದೇ ತೊಂದರೆಯಾದರೂ ಮೊದಲು ಬೀದಿಗಿಳಿಯುವುದು ನಾರಾಯಣಗೌಡರು ಹಾಗೂ ಕರವೇ ಕಾರ್ಯಕರ್ತರು. ಆಂಗ್ಲ ನಾಮಫಲಕಗಳ ಹಾವಳಿ ತಗ್ಗಿಸುವಲ್ಲಿ ಇವರ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದ್ದಾರೆ.

ಕಳೆದ 40 ವರ್ಷಗಳಿಂದ ಕನ್ನಡ ನೆಲ, ಜಲ ಹಾಗೂ ಭಾಷೆಯ ಕುರಿತಂತೆ ಸಾವಿರಾರು ಹೋರಾಟಗಳಲ್ಲಿ ಪಾಲ್ಗೊಂಡು, ಈಗಲೂ ಕನ್ನಡಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾರಾಯಣಗೌಡರನ್ನು ಈ ವರ್ಷದ ನಾಡಹಬ್ಬ ದಸರಾ ಉದ್ಘಾಟನೆಗೆ ಆಹ್ವಾನಿಸಬೇಕು ಎಂದು ಚನ್ನ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

RELATED ARTICLES
spot_img

Latest News