Thursday, April 16, 2026
Homeರಾಜ್ಯಡ್ರಗ್ಸ್ ದಂಧೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ : ಆರ್‌.ಅಶೋಕ್‌ ಎಚ್ಚರಿಕೆ

ಡ್ರಗ್ಸ್ ದಂಧೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ : ಆರ್‌.ಅಶೋಕ್‌ ಎಚ್ಚರಿಕೆ

Fight against the government if action is not taken against the drug

ಬೆಂಗಳೂರು,ಜ.31- ಯುವ ಜನಾಂಗದ ಭವಿಷ್ಯಕ್ಕೆ ಮಾರಕವಾಗಿರುವ ಈ ಡ್ರಗ್ಸ್ ದಂಧೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಎಚ್ಚರಿಕೆ ಕೊಟ್ಟಿದ್ದಾರೆ.

ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್‌‍ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ನಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ ಡ್ರಗ್ಸ್ ದಂಧೆಯಲ್ಲಿ ರಾಜ್ಯಗಳಲ್ಲಿಯೂ ಇದೆ ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರು ಉಡಾಫೆ ಉತ್ತರ ಕೊಟ್ಟಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್‌‍ ಇಲಾಖೆ ಕಾಂಗ್ರೆಸ್‌‍ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್‌್ಸದಂಧೆ ಪತ್ತೆ ಹಚ್ಚಲು, ಡ್ರಗ್‌್ಸದಂಧೆಕೋರರನ್ನು ಕಟ್ಟಿ ಹಾಕಲು ಮಹಾರಾಷ್ಟ್ರ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್‌‍ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

RELATED ARTICLES

Latest News