ಮಂಡ್ಯ,ನ.20- ಮಾಜಿ ಸಚಿವ ಡಿ.ಸಿ.ತಮಣ್ಣ ಅವರ ಧರ್ಮಪತ್ನಿ ಪ್ರಮೀಳಾ (57) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಲಕಾರಿಯಾಗದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಯವರೆಗೆ – ಬೆಂಗಳೂರಿನ ವಿಜಯನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಸಂಜೆ 4 ಗಂಟೆಯಿಂದ ನಾಳೆ ಬೆಳಿಗ್ಗೆ 11 ಗಂಟೆಯವರೆಗೆ – ಸ್ವಗ್ರಾಮವಾದ ಮದ್ದೂರು ತಾಲ್ಲೂಕಿನ ದೊಡ್ಡರಸಿನಕೆರೆ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಸ್ವಗ್ರಾಮದಲ್ಲೇ ಅಂತ್ಯಕ್ರಿಯೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೃತರು ಪತಿ ಡಿ.ಸಿ.ತಮಣ್ಣ ಹಾಗೂ ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ನಿಧನಕ್ಕೆ ಮಾಜಿ ಶಾಸಕ ಡಾ. ಕೆ. ಅನ್ನದಾನಿ, ಕೆಎಂಎ್ ಮಾಜಿ ನಿರ್ದೇಶಕ ವಿಶ್ವನಾಥ್, ಯುವ ಘಟಕದ ಜಿಲ್ಲಾಧ್ಯಕ್ಷ ರವಿ ಕಂಸಾಗರ, ತಾಲ್ಲೂಕು ಅಧ್ಯಕ್ಷ ಚಂದಹಳ್ಳಿ ಶ್ರೀಧರ್ ಸೇರಿದಂತೆ ವಿವಿಧ ಗಣ್ಯರು, ಮುಖಂಡರು ಸಂತಾಪ ಸೂಚಿಸಿದ್ದಾರೆ.
ಮೃತರ ಆತಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಭಗವಂತನು ಅವರ ಕುಟುಂಬಸ್ಥರಿಗೆ ದುಃಖವನ್ನು ಸಹಿಸುವ ಧೈರ್ಯವನ್ನು ನೀಡಲಿ ಎಂದು ಅಭಿಮಾನಿಗಳು, ಮುಖಂಡರು ಪ್ರಾರ್ಥಿಸಿದ್ದಾರೆ.
