Homeರಾಜ್ಯಜಿಲೆಟಿನ್‌ ಪತ್ತೆ ಪ್ರಕರಣ : ಪೊಲೀಸರ 4 ತಂಡಗಳಿದ ಗೋದಾಮುಗಳಲ್ಲಿ ಶೋಧ

ಜಿಲೆಟಿನ್‌ ಪತ್ತೆ ಪ್ರಕರಣ : ಪೊಲೀಸರ 4 ತಂಡಗಳಿದ ಗೋದಾಮುಗಳಲ್ಲಿ ಶೋಧ

Gelatin case: Four police teams search warehouses

ಬೆಂಗಳೂರು,ಮೇ 11- ತಾತಗುಣಿ ಬಳಿಯ ಒಡೆಯರಹಳ್ಳಿ ಗೇಟ್‌ ಬಳಿ ನಿನ್ನೆ ಜಿಲೆಟಿನ್‌ ಕಡ್ಡಿಗಳು ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ರಾಮನಗರ ಡಿವೈಎಸ್‌‍ಪಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಈಗಾಗಲೇ ವಿವಿಧ ಆಯಾಮಗಳಲ್ಲಿದ ತನಿಖೆ ನಡೆಸುತ್ತಿವೆ.

ಈ ಸ್ಥಳದಲ್ಲಿ ದೊರೆತ ಜಿಲೆಟಿನ್‌ ಕಡ್ಡಿಗಳನ್ನು ಯಾರು ಇಟ್ಟಿದ್ದಾರೆ ಎಂಬುವುದು ಇದುವರೆಗಿನ ತನಿಖೆಯಿಂದ ಸದ್ಯಕ್ಕೆ ತಿಳಿದು ಬಂದಿಲ್ಲ. ಈ ಸ್ಫೋಟಕ ಕಡ್ಡಿಗಳನ್ನು ವಿದ್ವಂಸಕ ಕೃತ್ಯಕ್ಕೆ ಬಳಸಲಾಗಿತ್ತೇ? ಅಥವಾ ಕ್ವಾರಿಗೆ ತೆಗೆದುಕೊಂಡು ಹೋಗುವಾಗ ಪೊಲೀಸರನ್ನು ನೋಡಿ ಜಿಲೆಟಿನ್‌ ಕಡ್ಡಿಗಳಿದ್ದ ಬಾಕ್ಸನ್ನು ಬಿಸಾಡಿ ಹೋಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಚುರುಕುಗೊಳಿಸಲಾಗಿದೆ.

ಒಂದು ತಂಡ ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ಮಾಡಲಾಗುತ್ತಿದ್ದು, ಮತ್ತೊಂದು ತಂಡ ಸ್ಥಳಕ್ಕೆ ಜಿಲೆಟಿನ್‌ ಕಡ್ಡಿ ಹೇಗೆ ಬಂತು, ಯಾರು ಅದನ್ನ ತಂದು ರಸ್ತೆ ಪಕ್ಕ ಹಾಕಿದ್ದಾರೆ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಅಲ್ಲದೇ ಜಿಲೆಟಿನ್‌ ಕಡ್ಡಿ ಬಳಸುವ ಕಲ್ಲುಕ್ವಾರಿ ಮಾಲೀಕರು ಹಾಗೂ ಕಾರ್ಮಿಕರ ಬಗ್ಗೆಯೂ ತನಿಖಾ ತಂಡಗಳು ಮಾಹಿತಿ ಕಲೆಹಾಕುತ್ತಿದ್ದು, ಸುತ್ತಮುತ್ತಲಿನಲ್ಲಿರುವ ಗೋದಾಮುಗಳನ್ನೂ ತಪಾಸಣೆ ನಡೆಸುತ್ತಿದ್ದಾರೆ.

ಬೆಂಗಳೂರು ಹೊರವಲಯದ ಕಗ್ಗಲೀಪುರ ಸಮೀಪ ಇರುವ ಆರ್ಟ್‌ ಆ್‌‍ ಲಿವಿಂಗ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಲಾದ ಧ್ಯಾನ ಮಂದಿರ ಉದ್ಘಾಟನೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಬೆಳಗ್ಗೆ ಆಗಮಿಸಿದ್ದರು.

ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿರೋದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಕಗ್ಗಲೀಪುರ ಸಮೀಪದ ತಾತಗುಣಿ ಬಳಿಯ ರಸ್ತೆ ಪಕ್ಕದಲ್ಲಿ ನಿನ್ನೆ ಬೆಳಗ್ಗೆ 10 ಗಂಟೆ ಸುಮಾರಿಗೆ ಪೊಲೀಸರ ಪರಿಶೀಲನೆ ವೇಳೆ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿವೆ. ತಕ್ಷಣ ಪೊಲೀಸರು ಜಿಲೆಟಿನ್‌ ಕಡ್ಡಿಗಳನ್ನ ವಶಕ್ಕೆ ಪಡೆದಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರ್ಯಕ್ರಮದಿಂದ ಪ್ರಧಾನಿ ಮೋದಿ ತೆರಳಿದ ಬಳಿಕ ಸ್ಥಳಕ್ಕೆ ಸುಕೋ ತಂಡ ಹಾಗೂ ಎ್‌‍ಎಸ್‌‍ಎಲ್‌ ತಂಡ ಭೇಟಿ ನೀಡಿ ತಪಾಸಣೆ ನಡೆಸಿವೆ. ಈ ಬಗ್ಗೆ ಕಗ್ಗಲೀಪುರ ಪೊಲೀಸ್‌‍ ಠಾಣೆಯಲ್ಲಿ ಎ್‌‍ಐಆರ್‌ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ನಡುವೆ ಮೋದಿ ಪಾಲ್ಗೊಳ್ಳುವ ಕಾರ್ಯಕ್ರಮದಲ್ಲಿ ಸ್ಫೋಟ ನಡೆಸುವುದಾಗಿ ಪೊಲೀಸ್‌‍ ಸಹಾಯವಾಣಿಗೆ ಕರೆ ಮಾಡಿದ್ದ ವ್ಯಕ್ತಿಗೂ, ಜಿಲೆಟಿನ್‌ ಕಡ್ಡಿಗಳು ಪತ್ತೆಯಾದ ಪ್ರಕರಣಕ್ಕೂ ಸಂಬಂಧವಿಲ್ಲ ಎಂಬುವುದು ಪೊಲೀಸರ ಈ ವರೆಗಿನ ತನಿಖೆಯಿಂದ ಗೊತ್ತಾಗಿದೆ.
ಒಟ್ಟಾರೆ ಪ್ರಧಾನಿ ಆಗಮಿಸಿದ ದಿನದಂದೇ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿರುವುದು ಪೊಲೀಸರ ಕಾರ್ಯಕ್ಷಮತೆಗೆ ಸವಾಲಾಗಿದೆ.

RELATED ARTICLES

Latest News