Homeರಾಜ್ಯ12 ಐಎಎಸ್‌‍ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ

12 ಐಎಎಸ್‌‍ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು,ಸೆ.23- ರಾಜ್ಯ ಸರ್ಕಾರ 12 ಮಂದಿ ಐಎಎಸ್‌‍ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಡಾ.ತ್ರಿಲೋಕ್‌ಚಂದ್ರ ಕೆ.ವಿ. ಅವರನ್ನು ಕೃಷಿ ಇಲಾಖೆ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ. ಈ ಹುದ್ದೆಯಲ್ಲಿದ್ದ ಕ್ಯಾಪ್ಟನ್‌ ಡಾ.ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.

ಡಾ. ರಾಕೇಶ್‌ ಕುಮಾರ್‌ ಕೆ. ಅವರಿಗೆ ನೀಡಿದ್ದ ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ಹುದ್ದೆಯ ಜವಾಬ್ದಾರಿಯನ್ನು ಹಿಂಪಡೆದಿದ್ದು, ಉಪ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ. ಜೊತೆಗೆ ಭೂ ದಾಖಲೆಗಳು ಮತ್ತು ಸರ್ವೆ ಇಲಾಖೆ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಈ ಹುದ್ದೆಯಲ್ಲಿದ್ದ ವೆಂಕಟ್‌ ರಾಜ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.

ಡಾ. ಅರುಂಧತಿ ಚಂದ್ರಶೇಖರ್‌ ಅವರನ್ನು ಖಜಾನೆ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದ್ದು, ಈ ಹುದ್ದೆಯ ಹೊಣೆಗಾರಿಕೆಯಲ್ಲಿದ್ದ ರಘುನಂದನ್‌ ಮೂರ್ತಿ ಅವರನ್ನು ಬಿಡುಗಡೆಗೊಳಿಸಲಾಗಿದೆ.
ಪಾಟೀಲ್‌ ಯಲಗೌಡ ಶಿವನಗೌಡ ಅವರನ್ನು ಗ್ರಾಮೀಣಾಭಿವೃದ್ಧಿ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ. ಈ ಹುದ್ದೆಯ ಸಮವರ್ತಿತ ಪ್ರಭಾರದಲ್ಲಿದ್ದ ಫೌಝಿಯ ತರನಮ್‌ ಬಿ. ಅವರನ್ನು ಬಿಡುಗಡೆಗೊಳಿಸಲಾಗಿದೆ. ಅಲ್ಲದೆ, ಪಾಟೀಲ್‌ ಯಲಗೌಡ ಶಿವನಗೌಡ ಅವರಿಗೆ ಪಂಚಾಯತ್‌ ರಾಜ್‌ ಆಯುಕ್ತರ ಹುದ್ದೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯ ನಿರ್ವಾಹಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಿ ಆದೇಶಿಸಲಾಗಿದೆ.

ವೈಶಾಲಿ ಎಂ.ಎಲ್‌. ಅವರನ್ನು ಎಂಎಸ್‌‍ಐಎಲ್‌ನ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿದ್ದು, ಈ ಹುದ್ದೆಯ ಸಮವರ್ತಿತ ಪ್ರಭಾರದಲ್ಲಿದ್ದ ಲವಿಶ್‌ ಒರ್ಡಿಯ ಅವರನ್ನು ಬಿಡುಗಡೆಗೊಳಿಸಲಾಗಿದೆ.ಗುಲ್ಬರ್ಗ ವಿದ್ಯುತ್‌ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿರುವ ಶಶಿಧರ್‌ ಕುರೇರ ಅವರಿಗೆ ಹೆಚ್ಚುವರಿಯಾಗಿ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ಹುದ್ದೆ ಜವಾಬ್ದಾರಿ ನೀಡಲಾಗಿದೆ. ಈ ಹುದ್ದೆಯಲ್ಲಿದ್ದ ಶಿಲ್ಪಾ ಆರ್‌. ಅವರನ್ನು ವರ್ಗಾವಣೆ ಮಾಡಲಾಗಿದೆ.

ಆನಂದ್‌ ಪ್ರಕಾಶ್‌ ಮೀನಾ ಅವರನ್ನು ವಿಜಯಪುರ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಗೆ ವರ್ಗಾಯಿಸಿದ್ದು, ಈ ಹುದ್ದೆಯಲ್ಲಿದ್ದ ರಿಶಿ ಆನಂದ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.ರಿಶಿ ಆನಂದ್‌ ಅವರನ್ನು ಶಿವಮೊಗ್ಗ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿದ್ದು, ಈ ಹುದ್ದೆಯಲ್ಲಿದ್ದ ಹೇಮಂತ್‌ ಎನ್‌. ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಹೇಮಂತ್‌ ಎನ್‌. ಅವರನ್ನು ಎಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ಈ ಹುದ್ದೆಯಲ್ಲಿದ್ದ ವೈಶಾಲಿ ಎಂ.ಎಲ್‌. ಅವರನ್ನು ವರ್ಗಾವಣೆ ಮಾಡಲಾಗಿದೆ. ದಿನೇಶ್‌ ಕುಮಾರ್‌ ಮೀನಾ ಅವರನ್ನು ಕೊಡಗು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಗೆ ವರ್ಗಾಯಿಸಿದ್ದು, ಈ ಹುದ್ದೆಯಲ್ಲಿದ್ದ ಆನಂದ್‌ ಪ್ರಕಾಶ್‌ ಮೀನಾ ಅವರನ್ನು ವರ್ಗಾವಣೆ ಮಾಡಿ ಆದೇಶಿಲಾಗಿದೆ.

RELATED ARTICLES
spot_img

Latest News