ಬೆಂಗಳೂರು, ಜು.25-ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚನ್ನಮ ದೇವೇಗೌಡ ಅವರ ನಿಧನಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪದನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು ಜುಲೈ 18ರಂದು ನಿಧನರಾದ ಚನ್ನಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಂತಾಪ ಸೂಚಿಸಿದರು. ದೇವೇಗೌಡ ಹಾಗೂ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ಚನ್ನಮ ಅವರ ಅಗಲಿಕೆಯ ದುಃಖದ ಸಂದರ್ಭದಲ್ಲಿ ತಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದ ರಾಜ್ಯಪಾಲರು, ಅಗಲಿದ ಆತಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಕುಟುಂಬದವರಿಗೆ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ದೇವೇಗೌಡರ ಪುತ್ರಿಯರಾದ ಅನಸೂಯ, ಶೈಲಜಾ ಮತ್ತಿತರ ಗಣ್ಯರು ಇದ್ದರು.
