Homeರಾಜ್ಯಬೆಂಗಳೂರಿಗೆ ಆಗಮಿಸಿದ ಪ್ರಧಾನಿಗೆ ಅದ್ದೂರಿ ಸ್ವಾಗತ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿಗೆ ಅದ್ದೂರಿ ಸ್ವಾಗತ

ಬೆಂಗಳೂರು-: ವಿವಿಧ ಅಭಿವೃದ್ಧಿ ಯೋಜನೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಗರದ ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಸುಧಾ ಯಾದವ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ವಿ. ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ,ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿ, ಪೊಲೀಸ್ ಮಹಾ ನಿರ್ದೇಶಕ ಡಾ. ಸಲಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಗಣ್ಯರು ಪ್ರಧಾನಿಯನ್ನು ಸ್ವಾಗತಿಸಿದರು.

ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿಗೆ ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.

RELATED ARTICLES

Latest News