ಬೆಳಗಾವಿ,ಡಿ.18- ವಿಧಾನಸಭೆಯಲ್ಲಿ ಅಂಗೀಕೃತವಾಗಿದ್ದ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಧಾನಪರಿಷತ್‌ನಲ್ಲಿ ಚರ್ಚೆಯ ನಂತರ ಅಂಗೀಕರಿಸಲಾಯಿತು.
ಉಪಮುಖ್ಯಮಂತ್ರಿಯೂ ಆಗಿರುವ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು, ವಿಧೇಯಕವನ್ನು ಮಂಡಿಸಿದರು. ವಿಧೇಯಕ ಮೇಲೆ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ರಮೇಶ್‌ಬಾಬು, ನಾಗರಾಜ್ ಯಾದವ್, ಎನ್.ರವಿಕುಮಾರ್, ಜಿ.ಟಿ.ಶ್ರೀನಿವಾಸ್ ಸೇರಿದಂತೆ ಹಲವು ಸದಸ್ಯರು ಮಾತನಾಡಿದರು.
ಚರ್ಚೆಯ ನಂತರ ಸದಸ್ಯರ ಕೆಲವು ಸಂದೇಹಗಳಿಗೆ ಉತ್ತರ ನೀಡಿದ ಸಚಿವ ಡಿ.ಕೆ.ಶಿವಕುಮಾರ್ ಅವರು, ವಿಧೇಯಕವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ತರಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ದುರದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ ನಂತರ ವಿಧೇಯಕವನ್ನು ಸದನ ಅಂಗೀಕಾರ ಮಾಡಿತು.
