Homeರಾಜ್ಯಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಉನ್ನತ ಮಟ್ಟದ ಪರಿಶೀಲನಾ ಸಭೆ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಉನ್ನತ ಮಟ್ಟದ ಪರಿಶೀಲನಾ ಸಭೆ

High-level review meeting for the implementation of Mekedatu project

ಬೆಂಗಳೂರು,ಆ.18- ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಕುಡಿಯುವ ನೀರು ಮತ್ತು ವಿದ್ಯುತ್‌ ಯೋಜನೆಯನ್ನು ಅತ್ಯಂತ ವೇಗವಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರವು ಸಮರೋಪಾದಿ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಲಸಂಪನೂಲ ಸಚಿವ ಎನ್‌. ಚೆಲುವರಾಯಸ್ವಾಮಿ ಹಾಗೂ ಹಿರಿಯ ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಅರಣ್ಯ ಇಲಾಖೆ ಕಾರ್ಯದರ್ಶಿ, ಜಲ ಸಂಪನೂಲ ಇಲಾಖೆ ಕಾರ್ಯದರ್ಶಿ ಗೌರವ್‌ ಗುಪ್ತ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿ ಯೋಜನೆಯ ಪ್ರಸ್ತುತ ಸ್ಥಿತಿಗತಿ ಹಾಗೂ ಮುಂದಿನ ಹಂತಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ಯೋಜನೆಗೆ ಅಗತ್ಯವಿರುವ ಅರಣ್ಯ ಇಲಾಖೆಯ ಕ್ಲಿಯರೆನ್‌್ಸ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಲು ನಿರ್ಧರಿಸಲಾಯಿತು. ಡ್ಯಾಮ್‌ ನಿರ್ಮಾಣ ಪ್ರದೇಶದಲ್ಲಿ ತೆರವುಗೊಳಿಸಬೇಕಾಗುವ ಮರಗಳಿಗೆ ನಿಯಮಾನುಸಾರ ಪರ್ಯಾಯವಾಗಿ ಕೈಗೊಳ್ಳಬೇಕಾದ ಕ್ರಮಗಳು, ಪರ್ಯಾಯ ಜಾಗದ ಹಂಚಿಕೆ ಹಾಗೂ ನಿಯಮಾವಳಿಗಳಂತೆ ಹೊಸದಾಗಿ ಸಸಿಗಳನ್ನು ನೆಟ್ಟು ಬೆಳೆಸುವ ಯೋಜನೆಗಳ ಬಗ್ಗೆ ಸಮಗ್ರವಾಗಿ ಸಮಾಲೋಚಿಸಲಾಯಿತು.

ಇತ್ತೀಚೆಗಷ್ಟೇ ವಿಸ್ತೃತ ಯೋಜನಾ ವರದಿಯನ್ನು ಮರುಪರಿಶೀಲಿಸಿ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮರುಸಲ್ಲಿಕೆ ಮಾಡಲಾಗಿದ್ದು, ಜಲಸಂಪನೂಲ ಸಚಿವ ಚೆಲುವರಾಯಸ್ವಾಮಿ ಹಾಗೂ ರಾಜ್ಯ ಸರ್ಕಾರವು ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ಆಕ್ರಮಣಕಾರಿ ಹೆಜ್ಜೆಗಳನ್ನು ಇಡುತ್ತಿವೆ. ಅರಣ್ಯ ಮಂಜೂರಾತಿ ಪಡೆದುಕೊಳ್ಳಲು ಮುಂದಿನ ಹಂತದ ಪ್ರಕ್ರಿಯೆಗಳನ್ನು ತಕ್ಷಣವೇ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.

RELATED ARTICLES
spot_img

Latest News