Homeರಾಜ್ಯಮುಂದಿನ ವರ್ಷದಿಂದ ಉನ್ನತ ಶಿಕ್ಷಣ ವ್ಯವಸ್ಥೆ ವಿಶ್ವದರ್ಜೆಗೆ : ಸಚಿವ ರಾಯರೆಡ್ಡಿ

ಮುಂದಿನ ವರ್ಷದಿಂದ ಉನ್ನತ ಶಿಕ್ಷಣ ವ್ಯವಸ್ಥೆ ವಿಶ್ವದರ್ಜೆಗೆ : ಸಚಿವ ರಾಯರೆಡ್ಡಿ

ಬೆಂಗಳೂರು, ನ.19- ಮುಂದಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ವಿಶ್ವದರ್ಜೆಯ ಬೋಧನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಉನ್ನತೀಕರಿಸುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ನೂತನವಾಗಿ ಆಯ್ಕೆಯಾಗಿರುವ ಪ್ರಾಂಶುಪಾಲರಿಗೆ ನೇಮಕಾತಿ ಆದೇಶ ವಿತರಿಸುವ ಶೈಕ್ಷಣಿಕ ಸಾರಥ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿಯಾದ ಬಳಿಕ ಎಲ್ಲ ಇಲಾಖೆಗಳಲ್ಲೂ ಪಾರದರ್ಶಕತೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ದೂರದೃಷ್ಟಿ ಯೊಂದಿಗೆ ಕರ್ನಾಟಕವನ್ನು ಅಭಿವೃದ್ಧಿಯ ಮಾದರಿ ರಾಜ್ಯವನ್ನಾಗಿ ರೂಪಿಸಿ, ಉತ್ತುಂಗಕ್ಕೇರಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು.

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಳೆದ ಏಳೆಂಟು ವರ್ಷಗಳಿಂದ ಪ್ರಾಂಶುಪಾಲರಿಲ್ಲದೆ ಆಡಳಿತಾತಕ ಹಾಗೂ ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಹಿನ್ನಡೆಯಾಗಿತ್ತು. ಇದೀಗ ಪಾರ ದರ್ಶಕವಾಗಿ ಪ್ರಾಂಶುಪಾಲರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಇಂದು 220 ಮಂದಿಗೆ ಸಾಂಕೇತಿಕವಾಗಿ ನೇಮಕಾತಿ ಆದೇಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಮ ಸರ್ಕಾರ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದು, 310 ಪ್ರಾಂಶುಪಾಲರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಇಂದು 220 ಮಂದಿಗೆ ಸಾಂಕೇತಿಕವಾಗಿ ನೇಮಕಾತಿ ಆದೇಶ ನೀಡಲಾಗುತ್ತಿದೆ. ಉಳಿದವರ ನೇಮಕಾತಿಯನ್ನು ಅಗತ್ಯ ದಾಖಲೆಗಳ ಪರಿಶೀಲನೆ ಬಳಿಕ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಇನ್ನೂ 130 ಪ್ರಾಂಶುಪಾಲರ ನೇಮಕಾತಿಗೆ ಅನುಮತಿ ದೊರೆತರೆ ರಾಜ್ಯದ ಎಲ್ಲ ಸರ್ಕಾರಿ ಕಾಲೇಜುಗಳಿಗೂ ಪ್ರಾಂಶುಪಾಲರನ್ನು ನೇಮಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಸರ್ಕಾರಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಬೋಧಕರ ಕೊರತೆ ನೀಗಿಸಲು ಸರ್ಕಾರ ವಿಶೇಷ ಗಮನ ಹರಿಸಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 3,000 ಪ್ರಾಧ್ಯಾಪಕರ ನೇಮಕಾತಿ ಘೋಷಣೆ ಮಾಡಲಾಗಿದೆ. ಈ ಸಂಬಂಧದ ಪ್ರಸ್ತಾವನೆ ಸಚಿವ ಸಂಪುಟದ ಮುಂದಿದ್ದು, ಮುಂದಿನ ಎರಡು ಮೂರು ವಾರಗಳಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ.

ರಾಜ್ಯದ 440 ಸರ್ಕಾರಿ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್‌ಗಳಲ್ಲಿರುವ ಸೌಲಭ್ಯಗಳು ಮತ್ತು ಕೊರತೆಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಲಾಗಿದೆ. ಸಿಬ್ಬಂದಿ, ಮೇಜು-ಕುರ್ಚಿ, ಪೀಠೋಪಕರಣಗಳು, ಶೌಚಾಲಯ, ಇದುವರೆಗೆ ಮಾಡಲಾಗಿರುವ ವೆಚ್ಚ, ಲಭ್ಯವಿರುವ ಅನುದಾನ ಸೇರಿದಂತೆ ಪ್ರತಿಯೊಂದು ವಿಚಾರದ ಮಾಹಿತಿಯನ್ನು ಕಲೆಹಾಕಿ ಸಮಗ್ರ ಕೈಪಿಡಿ ಸಿದ್ಧಪಡಿಸಲಾಗಿದೆ. ಈ ಮಾಹಿತಿಯ ಆಧಾರದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಯೋಜನೆ ರೂಪಿಸಲಾಗುವುದು ಎಂದರು.

RELATED ARTICLES

Latest News