ಬೆಂಗಳೂರು,ಜು.5- ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನವರ ಪಾಪದ ಕೊಡ ತುಂಬಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಿಂದೂಗಳು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡ ಸದಾಶಿವ ದೇಶಿಂಗಿ ಅವರು ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಯಾವುದೇ ಭಾಗದಲ್ಲೂ ಹಿಂದುಗಳ ಮೇಲೆ ಹಲ್ಲೆ ಅಥವಾ ಹತ್ಯೆ ನಡೆಯುವುದಿಲ್ಲ. ಕರ್ನಾಟಕದಲ್ಲಿ ಮಾತ್ರ ಇದು ವ್ಯವಸ್ಥಿತವಾಗಿ ನಡೆಯುತ್ತದೆ. ಒಂದಿಲ್ಲೊಂದು ಸರ್ಕಾರದ ವಿರುದ್ಧ ಸಮಸ್ತ ಹಿಂದೂಗಳು ತಿರುಗಿ ಬೀಳಲಿದ್ದಾರೆ ಎಂದು ಎಚ್ಚರಿಕೆ ಕೊಟ್ಟರು.
ಹಾವೇರಿಯ ಘಟನೆ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು. ಲೋಹಿತ್, ಶಿವರಾಜ್ ಸೇರಿ 5 ಜನರ ಮೇಲೆ ಹಲ್ಲೆ ಆಗಿದೆ. ಪಟಾಕಿ ಹೊಡೆದರೆಂಬ ಕ್ಷುಲ್ಲಕ ಕಾರಣಕ್ಕೆ ಮನೆಗೆ ನುಗ್ಗಿ ತಂದೆಯ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ತಡೆಯಲು ಹೋದ ಲೋಹಿತ್‌ನ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್‌ನವರಿಗೆ ಬಡ ಕುಟುಂಬಕ್ಕೆ ಧೈರ್ಯ ತುಂಬುವ ಮಾಡಬೇಕು ಅನ್ನಿಸಿಲ್ಲ. ಧೈರ್ಯ ಹೇಳುವ ಕಿಂಚಿತ್ತು ಕೆಲಸವನ್ನೂ ಕಾಂಗ್ರೆಸ್ ಮಾಡಿಲ್ಲ. ಪಕ್ಷಗಳು ಅಧಿಕಾರಕ್ಕೆ ಬರುತ್ತದೆ, ಹೋಗುತ್ತದೆ ಆದರೆ ಏನು ಕೆಲಸ ಮಾಡಿದ್ದೇವೆ ಎಂಬುದು ಮುಖ್ಯ ಎಂದರು. ಯಲ್ಲಾಪುರದಲ್ಲಿ ದಲಿತ ಮಹಿಳೆ ಹತ್ಯೆಯಾಗಿದೆ. ಯಾವೊಬ್ಬ ಸಚಿವರು ಹೋಗಿ ಸಾಂತ್ವನ ಹೇಳಿಲ್ಲ. ಬೆಂಗಳೂರಿನ ಎಸಿ ರೂಂನಲ್ಲಿ ಕೂತು, ಚೆಕ್ ಕಳುಹಿಸಿ ಕೊಡುತ್ತಾರೆ ಎಂದು ಕಿಡಿಕಾರಿದರು.
ಇದಕ್ಕೂ ಮುನ್ನ ವಿಜಯೇಂದ್ರ ಅವರು, ಕುರುಬ ಸಮುದಾಯದ ಮುಖಂಡರಾಗಿರುವ ಸದಾಶಿವ ದೇಶಿಂಗೆ ಪಕ್ಷದ ಬಾವುಟ ಕೊಟ್ಟು, ಕಂಬಳಿ ಹೊದೆಸಿ ಪಕ್ಷಕ್ಕೆ ಸೇರಿಸಿಕೊಂಡರು. ಸಚಿವ ಸತೀಶ್ ಜಾರಕಿಹೊಳಿ ಆಪ್ತ ವಲಯದಲ್ಲಿದ್ದ ದೇಶಿಂಗೆ ಗುರುತಿಸಿಕೊಂಡಿದ್ದಾರೆ. ಕೆಎಮ್‌ಎಫ್ ಮಾಜಿ ನಿರ್ದೇಶಕ, ರಾಯಭಾಗದಲ್ಲಿ ಪ್ರಭಾವಿಯಾಗಿದ್ದಾರೆ. ಅವರಿಗೆ ಕುರುಬ ಸಮಾಜದಲ್ಲಿ ತಮದೇ ಆದ ಶಕ್ತಿ ಇದೆ. ಬಿಜೆಪಿಗೆ ಅವರು ಬಂದಿದ್ದು ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕಕ್ಕೆ ಆನೆ ಬಲ ಬಂದಂತಾಗಿದೆ ಎಂದರು.
ಕನಕದಾಸ ಜಯಂತಿಯ ರಜೆ ಘೋಷಿಸಿದ್ದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಮಾಜದಲ್ಲಿ ಜಗ್ಗಟ್ಟಿನ ಪ್ರದರ್ಶನ ಅಗಬೇಕು. 2019ರಲ್ಲಿ ಬಿಜೆಪಿ ಸರ್ಕಾರ ಯಡಿಯೂರಪ್ಪ ಸಿಎಂ ಆಗಬೇಕು ಎಂದು ಕಾಂಗ್ರೆಸ್-ಜೆಡಿಎಸ್ ಪಕ್ಷಕೆ ರಾಜೀನಾಮೆ ಕೊಟ್ಟು ಬಂದರು. ಬೈರತಿ ಬಸವರಾಜು, ಎಂಟಿಬಿ ನಾಗರಾಜ್ ಅವರ ತ್ಯಾಗ ಮರೆಯಲು ಸಾಧ್ಯವಿಲ್ಲ. ಸಚಿವರಾಗಿದ್ದರೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂದರು.
ಬಿಜೆಪಿ ಹಾಲುಮತ ಸಮಾಜಕ್ಕೆ ಎಂದಿಗೂ ಅನ್ಯಾಯ ಮಾಡಿಲ್ಲ. ವಿಜಯ್ ಶಂಕರ್ ಅವರನ್ನು ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರೂ ಎಂಎಲ್ಸಿ ಮಾಡಿ ಸಚಿವ ಸ್ಥಾನದಲ್ಲಿ ಕೂರಿಸಿದ್ದು ಯಡಿಯೂರಪ್ಪ ಎಂದು ಉಲ್ಲೇಖಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕರಾದ ದುರ್ಯೋಧನ ಐಹೊಳೆ, ಬಸವರಾಜ ಮತ್ತಿಮಾಡು, ಬೈರತಿ ಬಸವರಾಜು, ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಉಪಸ್ಥಿತಿ
