ಬೆಂಗಳೂರು,ನ.9-ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸೌ ಅಧಿಕಾರಿಗಳು ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ಭರ್ಜರಿ ಕಾರ್ಯಾಚರಣೆ ನಡೆಸಿ, 5.51 ಕೋಟಿ ರೂ. ಮೌಲ್ಯದ 15.750 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ನ. 6ರಂದು ಬ್ಯಾಂಕಾಕ್‌ನಿಂದ ಥಾಯ್ಲೆಂಡ್ ಮೂಲಕ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನೊಬ್ಬನನ್ನು ತಪಾಸಣೆ ನಡೆಸಿದಾಗ ಈ ಮಾದಕ ವಸ್ತು ಪತ್ತೆಯಾಗಿದೆ.
ಪ್ರಯಾಣಿಕನ ಚೆಕ್-ಇನ್ ಲಗೇಜ್‌ನಲ್ಲಿ ಹೈಡ್ರೋಪೋನಿಕ್ ಗಾಂಜಾವನ್ನು ರಹಸ್ಯವಾಗಿ ಅಡಗಿಸಿಟ್ಟಿರುವುದು ಕಸ್ಟಮ್ಸೌಅಧಿಕಾರಿಗಳ ತಪಾಸಣೆ ವೇಳೆ ಬೆಳಕಿಗೆ ಬಂದಿದೆ.
ವಶಪಡಿಸಿಕೊಂಡಿರುವ 15.750 ಕೆ.ಜಿ. ಗಾಂಜಾದ ಅಂದಾಜು ಮೌಲ್ಯ 5.51 ಕೋಟಿ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ಇಲಾಖೆ ತಿಳಿಸಿದೆ.
