Sunday, December 28, 2025
Homeರಾಜಕೀಯಡ್ರಗ್ಸ್ ದಂಧೆಗೆ ಕಡಿವಾಣ ಹಾಕದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ : ಆರ್‌.ಅಶೋಕ್‌ ಎಚ್ಚರಿಕೆ

ಡ್ರಗ್ಸ್ ದಂಧೆಗೆ ಕಡಿವಾಣ ಹಾಕದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ : ಆರ್‌.ಅಶೋಕ್‌ ಎಚ್ಚರಿಕೆ

If the drug trade is not curbed, there will be a fierce fight against the government: R. Ashok warns

ಬೆಂಗಳೂರು,ಡಿ.28- ಯುವ ಜನಾಂಗದ ಭವಿಷ್ಯಕ್ಕೆ ಮಾರವಾಗಿರುವ ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿ, ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್‌‍ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಎಕ್‌್ಸನಲ್ಲಿ ಸರ್ಕಾರದ ವಿರುದ್ದ ಪೋಸ್ಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ ಡ್ರಗ್‌್ಸ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ ಎಂದು ಇದರ ಗಂಭೀರತೆ ಅರಿಯದೆ ಗೃಹಸಚಿವ ಪರಮೇಶ್ವರ್‌ ಅವರು ಉಡಾಫೆ ಉತ್ತರ ಕೊಟ್ಟಿದ್ದರು ಎಂದು ಕಿಡಿಕಾರಿದರು.

ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಹಚ್ಚಿ, ಸುಮಾರು 390 ಕೋಟಿ ರೂ. ಮೌಲ್ಯದ 192 ಕೆ.ಜಿ. ಮೆಫೆಡ್ರೋನ್‌ ಡ್ರಗ್ಸ್ ವಶಪಡಿಸಿಕೊಂಡಿದ್ದ ಮಹಾರಾಷ್ಟ್ರ ಪೊಲೀಸರು ಇದೀಗ ಬೆಂಗಳೂರಿನ 3 ಡ್ರಗ್ಸ್ ಫ್ಯಾಕ್ಟರಿ ಮೇಲೆ ನಡೆಸಿ 56 ಕೋಟಿ ರೂ. ಮೌಲ್ಯದ ಡ್ರಗ್‌್ಸ ವಶಪಡಿಸಿಕೊಂಡಿದ್ದಾರೆ.

ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್‌‍ ಇಲಾಖೆ ಕಾಂಗ್ರೆಸ್‌‍ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್‌್ಸ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಹಾಕಲು ಮಹಾರಾಷ್ಟ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್‌‍ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

RELATED ARTICLES

Latest News