Saturday, April 18, 2026
Homeರಾಷ್ಟ್ರೀಯಕಳೆದ 2025-26ನೇ ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿ 1,10,813.30 ಕೋಟಿ ರೂ. ವಾಣಿಜ್ಯ ತೆರಿಗೆಗಳ ಸಂಗ್ರಹ

ಕಳೆದ 2025-26ನೇ ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿ 1,10,813.30 ಕೋಟಿ ರೂ. ವಾಣಿಜ್ಯ ತೆರಿಗೆಗಳ ಸಂಗ್ರಹ

In the last financial year 2025-26, the state collected Rs. 1,10,813.30 crore in commercial taxes

ಬೆಂಗಳೂರು,ಏ.7- ಕಳೆದ 2025-26ನೇ ಆರ್ಥಿಕ ಸಾಲಿನಲ್ಲಿ 1,10,813.30 ಕೋಟಿ ರೂ.ನಷ್ಟು ರಾಜ್ಯದಲ್ಲಿ ವಾಣಿಜ್ಯ ತೆರಿಗೆಗಳ ಸಂಗ್ರಹ ಆಗಿದೆ.ಇದು 2024-25ನೇ ಆರ್ಥಿಕ ಸಾಲಿಗಿಂತ 8228 ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗಿದೆ. ಇದುವರೆಗಿನ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಇದು ಅತೀ ಹೆಚ್ಚಿನ ಸಂಗ್ರಹವಾಗಿದೆ.

ವಾಣಿಜ್ಯ ತೆರಿಗೆಗಳ ಇಲಾಖೆ ಮಾಹಿತಿ ಪ್ರಕಾರ, 2024-25ನೇ ಆರ್ಥಿಕ ಸಾಲಿನಲ್ಲಿ ಸರಕು ಸೇವಾ ತೆರಿಗೆ, ಕರ್ನಾಟಕ ಮಾರಾಟ ತೆರಿಗೆ ಹಾಗೂ ವೃತ್ತಿ ತೆರಿಗೆ ಸೇರಿದಂತೆ ಒಟ್ಟು 102585.52 ಕೋಟಿ ರೂ.ನಷ್ಟು ಸಂಗ್ರಹವಾಗಿದ್ದು, 2025-26ನೇ ಸಾಲಿನಲ್ಲಿ ಒಟ್ಟು 1,10,813.30 ಕೋಟಿ ರೂ.ನಷ್ಟು ರಾಜ್ಯದಲ್ಲಿ ವಾಣಿಜ್ಯ ತೆರಿಗೆಗಳ ಸಂಗ್ರಹ ಆಗಿದೆ.

ಸರಕು ಸೇವಾ ತೆರಿಗೆ ಹಾಗೂ ಕರ್ನಾಟಕ ಮಾರಾಟ ತೆರಿಗೆ ಸಂಗ್ರಹದಲ್ಲಿ ಗಣನೀಯ ಏರಿಕೆಯಾಗಿದೆ. ಅದೇ ರೀತಿ ವೃತ್ತಿ ತೆರಿಗೆ ಸಂಗ್ರಹದಲ್ಲೂ ಹಿಂದಿನ ವರ್ಷಕ್ಕಿಂತ ಹೆಚ್ಚು ಸಂಗ್ರಹವಾಗಿರುವುದರಿಂದ ದಾಖಲೆ ಪ್ರಮಾಣದಲ್ಲಿ ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿದೆ.
ಇದರಲ್ಲಿ 82215.60 ಕೋಟಿ ರೂ., ಸರಕು ಸೇವಾ ತೆರಿಗೆ 2799.54 ಕೋಟಿ ರೂ., ಕರ್ನಾಟಕ ಮಾರಾಟ ತೆರಿಗೆ ಹಾಗೂ 1498.16 ಕೋಟಿ ರೂ. ವೃತ್ತಿ ತೆರಿಗೆ ಸೇರಿದೆ.

ಕಳೆದ ಮಾರ್ಚ್‌ನಲ್ಲೂ ಕೂಡ ದಾಖಲೆ ಪ್ರಮಾಣದ ತೆರಿಗೆ ಸಂಗ್ರಹವಾಗಿದೆ. ವರ್ಷದ 12 ತಿಂಗಳುಗಳಲ್ಲಿ ಮಾರ್ಚ್‌ ತಿಂಗಳಿನಲ್ಲೇ ಅಧಿಕ ಪ್ರಮಾಣದ ತೆರಿಗೆಗಳ ಸಂಗ್ರಹ ಮಾಡಲಾಗಿದೆ.
7800.60 ಕೋಟಿ ರೂ. ಸರಕು ಸೇವಾ ತೆರಿಗೆ, 2362.54 ಕೋಟಿ ರೂ. ಕರ್ನಾಟಕ ಮಾರಾಟ ತೆರಿಗೆ ಹಾಗೂ 159.26 ಕೋಟಿ ರೂ. ವೃತ್ತಿ ತೆರಿಗೆ ಸೇರಿದಂತೆ ಒಟ್ಟು 10322.40 ಕೋಟಿ ರೂ. ಸಂಗ್ರಹವಾಗಿದೆ.

ಫೆಬ್ರವರಿ ತಿಂಗಳಿನಲ್ಲಿ 10261.32 ಕೋಟಿ ರೂ.ಗಳಷ್ಟು ಸಂಗ್ರಹವಾಗಿತ್ತು. ಇಡೀ ವರ್ಷದಲ್ಲಿ ಮಾರ್ಚ್‌ ತಿಂಗಳಿನಲ್ಲೇ ಅಧಿಕ ಪ್ರಮಾಣದ ತೆರಿಗೆ ಸಂಗ್ರಹವಾದಂತಾಗಿದೆ.

RELATED ARTICLES

Latest News