Sunday, January 25, 2026
Homeರಾಜ್ಯಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್‌, ಜನಪ್ರತಿನಿಧಿಗಳ ಫೋನ್ ಕರೆ ಸ್ವೀಕರಿಸುವುದು ಕಡ್ಡಾಯ

ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್‌, ಜನಪ್ರತಿನಿಧಿಗಳ ಫೋನ್ ಕರೆ ಸ್ವೀಕರಿಸುವುದು ಕಡ್ಡಾಯ

It is mandatory for government officials to accept phone calls from people's representatives

ಬೆಂಗಳೂರು, ಜ.25- ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದೆ. ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಶಾಸಕರು, ಪರಿಷತ್‌ ಸದಸ್ಯರ, ಸಂಸದರ ಕರೆ ಸ್ವೀಕರಿಸುವ ಸಂಬಂಧ ಸರ್ಕಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.

ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್‌ಎಗಳ ಮತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ ಬಂದಾಗ ಇತರ ಕೆಲಸಗಳಲ್ಲಿ ನಿರತರಾಗಿದ್ದಲ್ಲಿ, ಮರಳಿ ಕರೆ ಮಾಡಿ ಮಾತನಾಡಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ವಿಧಾನಸಭಾ ಹಾಗೂ ಪರಿಷತ್ತಿನ ಸದಸ್ಯರಿಗೆ ವಿನಂತಿಸಿಕೊಂಡಾಗ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಬೇಕಾಗುತ್ತದೆ.

ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಇನುಂದೆ ಎಲ್ಲ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ, ಪರಿಷತ್ತಿನ ಸದಸ್ಯರು, ಸಂಸದರ ದೂರವಾಣಿ ಸಂಖ್ಯೆಯನ್ನು ತಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಎಂದು ಸೂಚಿಸಲಾಗಿದೆ.ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸುತ್ತೋಲೆ ಹೊರಡಿಸಿದ್ದಾರೆ.

RELATED ARTICLES

Latest News