Homeರಾಜ್ಯಬಿಡದಿ ಟೌನ್‌ಶಿಪ್‌ ವಿರೋಧಿಸಿ ನಾಳೆ ಜೆಡಿಎಸ್‌‍ ಬೃಹತ್‌ ಪ್ರತಿಭಟನೆ

ಬಿಡದಿ ಟೌನ್‌ಶಿಪ್‌ ವಿರೋಧಿಸಿ ನಾಳೆ ಜೆಡಿಎಸ್‌‍ ಬೃಹತ್‌ ಪ್ರತಿಭಟನೆ

ಬೆಂಗಳೂರು,ಆ.17- ಬಿಡದಿ ಉಪನಗರ ಯೋಜನೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿರುವ ಜೆಡಿಎಸ್‌‍ ನಾಳೆ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಾಳೆ ಬೆಳಿಗ್ಗೆ 10 ಘಂಟೆಗೆ ಪ್ರತಿಭಟನಾ ಸಮಾವೇಶ ನಡೆಸಲಿದೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಡದಿ ಉಪನಗರ ಯೋಜನೆಯನ್ನು ಕೈಬಿಡುವಂತೆ ರಾಜ್ಯಸರ್ಕಾರವನ್ನು ಆಗ್ರಹಿಸಲಿದ್ದಾರೆ.

ಬಿಡದಿ ಉಪನಗರ ಯೋಜನೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಈಗಾಗಲೇ 2 ಬಾರಿ ಜೆಡಿಎಸ್‌‍ ಪಾದಯಾತ್ರೆ ನಡೆಸಿದೆ.ಬೈರಮಂಗಲದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಹಮಿಕೊಂಡಿದ್ದ ಪಾದಯಾತ್ರೆಯನ್ನು ಮಾರ್ಗಮಧ್ಯೆ ತಡೆಯಲಾಗಿತ್ತು. ಹೀಗಾಗಿ ಆ.11 ರಂದು ನಡೆಯಬೇಕಿದ್ದ ಈ ಪ್ರತಿಭಟನಾ ಸಮಾವೇಶವನ್ನು ನಾಳೆಗೆ ಮುಂದೂಡಲಾಗಿತ್ತು.

ಆ.9 ಮತ್ತು 10 ರಂದು ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಪಾದಯಾತ್ರೆ ಕೈಗೊಳ್ಳಲಾಗಿತ್ತು. ಪಕ್ಷದ ಕಾರ್ಯಕರ್ತರು ಸೇರಿದಂತೆ ಅಪಾರ ಸಂಖ್ಯೆಯ ರೈತರು ಬೆಂಬಲ ನೀಡಿದ್ದರು.ನಾಳೆ ನಡೆಯುವ ಪ್ರತಿಭಟನೆಯಲ್ಲಿ ಉಪನಗರ ಯೋಜನಾ ವ್ಯಾಪ್ತಿಯ ರೈತರು ಭಾಗವಹಿಸುವ ನಿರೀಕ್ಷೆ ಇದೆ.

RELATED ARTICLES
spot_img

Latest News