Tuesday, May 5, 2026
Homeರಾಜ್ಯಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್‌ ಗೆಲುವು ಸತ್ಯಕ್ಕೆ ಸಿಕ್ಕ ಜಯ : ಬಿ.ವೈ.ವಿಜಯೇಂದ್ರ

ಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್‌ ಗೆಲುವು ಸತ್ಯಕ್ಕೆ ಸಿಕ್ಕ ಜಯ : ಬಿ.ವೈ.ವಿಜಯೇಂದ್ರ

Jeevaraj's victory in the recount of postal votes is a victory for truth: B.Y. Vijayendra

ಬೆಂಗಳೂರು,ಮೇ 3- ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಡಿ.ಎನ್‌ ಜೀವರಾಜ್‌ ಗೆಲುವು ಸಾಧಿಸಿರುವುದಕ್ಕೆ ವೋಟ್‌ ಚೋರ್‌ ಕೌನ್‌ ಹೈ? ರಾಹುಲ್‌ ಗಾಂಧಿ ಹೈ! ಎಂದು ಬಿಜೆಪಿ ಕಾಲೆಳೆದಿದೆ.

ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಅವರುಗಳು ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಪಕ್ಷದ ಅಭ್ಯರ್ಥಿ ಡಿ.ಎನ್‌. ಜೀವರಾಜ್‌ ಅವರ ಈ ಗೆಲುವು ನಮ ಚುನಾವಣಾ ವ್ಯವಸ್ಥೆ ಹಾಗೂ ನ್ಯಾಯಾಂಗದ ಮೇಲಿನ ವಿಶ್ವಾಸಕ್ಕೆ ಸಿಕ್ಕ ಗೆಲುವು ಎಂದು ಬಿಜೆಪಿ ಹೇಳಿದೆ.

ಸಾಮಾಜಿಕ ಜಾಲತಾಣ ಎ್ಸ್‌‍ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಪಕ್ಷದ ಅಭ್ಯರ್ಥಿ ಡಿ.ಎನ್‌. ಜೀವರಾಜ್‌ ಅವರ ಈ ಗೆಲುವು ನಮ ಚುನಾವಣಾ ವ್ಯವಸ್ಥೆ ಹಾಗೂ ನ್ಯಾಯಾಂಗದ ಮೇಲಿನ ವಿಶ್ವಾಸಕ್ಕೆ ಸಿಕ್ಕ ಗೆಲುವಾಗಿದೆ. ಈ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಸಮಸ್ತ ಮತದಾರ ಬಂಧುಗಳಿಗೂ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಸತತ ಪರಿಶ್ರಮ ಮತ್ತು ಹೋರಾಟಕ್ಕೆ ಇಂದು ಪ್ರತಿಲ ದೊರೆತಿದೆ. ಹೈಕೋರ್ಟ್‌ ಆದೇಶದಂತೆ ನಡೆದ ಅಂಚೆ ಮತಗಳ ಮರು ಎಣಿಕೆ ನಂತರ ಲಿತಾಂಶ ಘೋಷಿಸಲಾಗಿದೆ. ಸಂವಿಧಾನಾತಕ ಹೋರಾಟದ ಮೂಲಕ ಮತದಾರರ ಪ್ರತಿ ಮತಕ್ಕೂ ಗೌರವ ತಂದುಕೊಟ್ಟ ಜೀವರಾಜ್‌ ಅವರಿಗೆ ಅಭಿನಂದನೆಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸತ್ಯ ಯಾವತ್ತೂ ಸೋಲುವುದಿಲ್ಲ ಎನ್ನುವುದಕ್ಕೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಪ್ರಕರಣ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಕೂಡಾ ಪ್ಟೋ್‌ ಮಾಡಿದ್ದು, ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಲಿತಾಂಶ ಕಾಂಗ್ರೆಸ್‌‍ ಪಕ್ಷದ ಕರಾಳ ಮುಖವನ್ನ ಮತ್ತೊಮೆ ಬಯಲು ಮಾಡಿದೆ. ಜನಾದೇಶಕ್ಕೆ ಮೋಸ ಮಾಡಿ ಅಕ್ರಮವಾಗಿ ಗೆಲುವು ಸಾಧಿಸಲು ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್‌‍ ಪಕ್ಷಕ್ಕೆ ನ್ಯಾಯಾಂಗ ನೀಡಿದ ತಕ್ಕ ಉತ್ತರ ಎಂದು ತಿರುಗೇಟು ನೀಡಿದ್ದಾರೆ.

2023ರ ಚುನಾವಣೆಯಲ್ಲಿ 279 ಅಂಚೆ ಮತಗಳನ್ನು ಅಕ್ರಮವಾಗಿ ತಿರಸ್ಕರಿಸುವ ಮೂಲಕ ಜನಾದೇಶವನ್ನು ಕಸಿದುಕೊಳ್ಳಲಾಗಿತ್ತು. ಅಂದು ಬಿಜೆಪಿ ಅಭ್ಯರ್ಥಿ ಡಿ.ಎನ್‌. ಜೀವರಾಜ್‌ ಅವರ ಮನವಿಯನ್ನು ತಿರಸ್ಕರಿಸಿ ಕಾಂಗ್ರೆಸ್‌‍ನ ಟಿ.ಡಿ. ರಾಜೇಗೌಡರನ್ನು ವಿಜೇತರೆಂದು ಘೋಷಿಸಲಾಗಿತ್ತು.

ಅಧಿಕಾರ ಬಲಕ್ಕೆ ಮಣಿಯದ ಜೀವರಾಜ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಆರ್‌. ನಟರಾಜ್‌ ಅವರ ಪೀಠವು ನೀಡಿದ ಐತಿಹಾಸಿಕ ಆದೇಶದಂತೆ ಮರು ಎಣಿಕೆ ನಡೆಯಿತು. ಕಾಂಗ್ರೆಸ್‌‍ ಪಕ್ಷದ ಮೋಸ ಬಯಲಾಯಿತು ಎಂದು ಆರೋಪಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಅನರ್ಹವಾಗಿ ಅಧಿಕಾರ ಅನುಭವಿಸಿದ ಕಾಂಗ್ರೆಸ್‌‍ಗೆ ಈಗ ಮುಖಭಂಗವಾಗಿದೆ. ಇದು ಕೇವಲ ಒಬ್ಬ ವ್ಯಕ್ತಿಯ ಗೆಲುವಲ್ಲ, ಇದು ಪ್ರಜಾಪ್ರಭುತ್ವದ ಗೆಲುವು. ಶೃಂಗೇರಿಯ ಮತದಾರರ ಮತದ ಮೌಲ್ಯಕ್ಕೆ ಸಂದ ಜಯ.ನ್ಯಾಯದೇವತೆಯ ಮೇಲೆ ವಿಶ್ವಾಸವಿಟ್ಟು ಸಂವಿಧಾನಾತಕವಾಗಿ ಹೋರಾಡಿ ನ್ಯಾಯ ಪಡೆದ ಡಿ.ಎನ್‌. ಜೀವರಾಜ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಸತ್ಯಮೇವ ಜಯತೇ! ಎಂದು ಅವರು ಬರೆದುಕೊಂಡಿದ್ದಾರೆ.

RELATED ARTICLES

Latest News