Homeರಾಜ್ಯಕೆ.ಎನ್‌.ರಾಜಣ್ಣಗೆ ಕೈತಪ್ಪಿದ ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷ ಸ್ಥಾನ : ರಾಜೇಂದ್ರ ರಾಜಣ್ಣ ಅಸಮಾಧಾನ

ಕೆ.ಎನ್‌.ರಾಜಣ್ಣಗೆ ಕೈತಪ್ಪಿದ ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷ ಸ್ಥಾನ : ರಾಜೇಂದ್ರ ರಾಜಣ್ಣ ಅಸಮಾಧಾನ

ಬೆಂಗಳೂರು, ಸೆ.12- ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕೆ.ಎನ್‌.ರಾಜಣ್ಣ ಅವರ ಪುತ್ರ ಹಾಗೂ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಅಪೆಕ್ಸ್ ಬ್ಯಾಂಕ್‌ಗೆ ರಾಜಣ್ಣ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಭರವಸೆ ನೀಡುವ ಜೊತೆಗೆ ಪ್ರಯತ್ನ ಕೂಡ ಮಾಡಿದ್ದರು. ಆದರೆ ಕಾಣದ ಕೈಗಳು ಕೆಲಸ ಮಾಡಿದ್ದರಿಂದಾಗಿ ರಾಜಣ್ಣ ಅವರಿಗೆ ಅವಕಾಶ ತಪ್ಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಣ್ಣ ಅವರನ್ನು ಕಡೆಗಣಿಸಿದಷ್ಟು ಕಾಂಗ್ರೆಸ್‌‍ ಪಕ್ಷಕ್ಕೆ ಹಾನಿಯಾಗಲಿದೆ. ಪರಿಶಿಷ್ಟ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಮತಗಳು ಕಾಂಗ್ರೆಸ್‌‍ನಿಂದ ದೂರವಾಗುತ್ತವೆ. ರಾಜಣ್ಣ ಅವರನ್ನು ತುಳಿಯಲು ವ್ಯವಸ್ಥಿತವಾದಂತಹ ಪ್ರಯತ್ನಗಳಾಗುತ್ತಿವೆ ಎಂದು ಅವರು ಆರೋಪಿಸಿದರು.

ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷ ಸ್ಥಾನಕ್ಕೆ ರಾಜಣ್ಣ ಅಧ್ಯಕ್ಷರಾಗುತ್ತಾರೆ ಎಂದು ಹಲವು ಬಾರಿ ಹೇಳಲಾಗಿತ್ತು. ಆದರೆ ಕೊನೆಗಳಿಗೆಯಲ್ಲಿ ಬೇರೆ ರೀತಿಯ ಬೆಳವಣಿಗೆಗಳಾಗಿದ್ದವು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಪೆಕ್ಸ್ ಬ್ಯಾಂಕ್‌ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಆಪ್ತ ಕೆ.ಎನ್‌.ರಾಜಣ್ಣ ಅವರಿಗೆ ಹಿನ್ನಡೆಯಾಗಿದ್ದು, ಪಕ್ಷದಲ್ಲಿ ಅಸಮಾಧಾನ ಕುದಿಯುವಂತೆ ಮಾಡಿದೆ.

RELATED ARTICLES
spot_img

Latest News