Saturday, January 10, 2026
Homeರಾಜ್ಯಕಾಂಗ್ರೆಸ್ಸಿಗರಿಗೆ ಕನ್ನಡಿಗರು ತಕ್ಕಪಾಠ ಕಲಿಸುವ ದಿನ ದೂರವಿಲ್ಲ : ಅಶೋಕ್‌

ಕಾಂಗ್ರೆಸ್ಸಿಗರಿಗೆ ಕನ್ನಡಿಗರು ತಕ್ಕಪಾಠ ಕಲಿಸುವ ದಿನ ದೂರವಿಲ್ಲ : ಅಶೋಕ್‌

Kannadigas will teach Congressmen a lesson is not far away: Ashok

ಬೆಂಗಳೂರು,ಜ.9- ಪಕ್ಷದ ರಾಜಕೀಯ ಲಾಭಕ್ಕಾಗಿ, ಯಾರದ್ದೋ ಸ್ವಾರ್ಥಕ್ಕಾಗಿ ಕರ್ನಾಟಕದ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಪದೇ ಪದೇ ಬಲಿ ಕೊಡುತ್ತಿರುವ ಕಾಂಗ್ರೆಸ್‌‍ ಪಕ್ಷಕ್ಕೆ ಕನ್ನಡಿಗರು ತಕ್ಕಪಾಠ ಕಲಿಸುವ ದಿನ ಬಹಳ ದೂರವಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರ್ನಾಟಕದ ಸ್ವಾಭಿಮಾನ, ಆತಗೌರವಕ್ಕೆ ಪದೇ ಪದೇ ಧಕ್ಕೆ ತರುತ್ತಿರುವ ಕಾಂಗ್ರೆಸ್‌‍ ಪಕ್ಷದ ಕೇರಳ ಪಟಾಲಂ, ಕನ್ನಡಿಗರ ತಾಳೆಯನ್ನು ಪರೀಕ್ಷಿಸುತ್ತಿದ್ದಾರೆ. ಅಕ್ರಮ ವಲಸಿಗರು ಕರ್ನಾಟಕದ ಭೂಮಿಯನ್ನು ಒತ್ತುವರಿ ಮಾಡಿಕೊಂಡರೂ, ಮಾನವೀಯತೆ ದೃಷ್ಟಿಯಿಂದ ಮನೆ ಕೊಡಬೇಕು ಎಂದು ರೋಹಿಂಗ್ಯಗಳು, ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ಸಂಸದ ಕೆ.ಸಿ.ವೇಣುಗೋಪಾಲ್‌ ಅವರ ಹೃದಯ ಈಗ, ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸತ್ತರೂ, ವಯನಾಡಿನಲ್ಲಿ ಪ್ರಕೃತಿ ವಿಕೋಪ ಉಂಟಾದರೂ, ಕೇರಳಿಗರ ಪರವಾಗಿ ಕರ್ನಾಟಕ ಸರ್ಕಾರದ ಮೇಲೆ ಸವಾರಿ ಮಾಡುವ ಸಂಸದೆ ಪ್ರಿಯಾಂಕ ವಾದ್ರಾ ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ 1ರಿಂದ 10ನೇ ತರಗತಿಯವರೆಗೆ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆ -2025ರ ವಿರುದ್ಧ ಧ್ವನಿ ಎತ್ತುವ ಮೂಲಕ ಈಗ ಕನ್ನಡಿಗರ ಪರ ನಿಲ್ಲುತ್ತಾರಾ? ಎಂದು ಅವರು ತಾರಾಟೆಗೆ ತೆಗೆದುಕೊಂಂಡಿದ್ದಾರೆ.

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವ ವಿಷಯದಲ್ಲಿ ಕೇರಳದ ಪರ ತೋರಿದ ಕಾಳಜಿಯನ್ನು ಕಾಂಗ್ರೆಸ್‌‍ ನಾಯಕರು ಈಗ ಕನ್ನಡಿಗರ ಪರವಾಗಿ ತೋರುತ್ತಾರಾ? ಎಂದು ಅಶೋಕ್‌ ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.

RELATED ARTICLES

Latest News