Homeರಾಜ್ಯವಿವಿಧ ಹುದ್ದೆಗಳಿಗೆ KEA ಸ್ಪರ್ಧಾತಕ ಪರೀಕ್ಷೆ : ಕೇಂದ್ರಗಳ ಸುತ್ತ ನಿಷೇಧಾಜ್ಞೆ

ವಿವಿಧ ಹುದ್ದೆಗಳಿಗೆ KEA ಸ್ಪರ್ಧಾತಕ ಪರೀಕ್ಷೆ : ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಬೆಂಗಳೂರು,ನ.20-ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ವಿವಿಧ ಹುದ್ದೆಗಳಿಗೆ ಸ್ಪರ್ಧಾತಕ ಪರೀಕ್ಷೆ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಹೊರಡಿಸಲಾಗಿದೆ.

ಕಾರಾಗೃಹ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಶಾಲಾ ಶಿಕ್ಷಣ ಇಲಾಖೆಯಲ್ಲಿನ ವಿವಿಧ ಹುದ್ದೆಗಳಿಗೆ ಸ್ಪರ್ಧಾತಕ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ದೋಷ ರಹಿತವಾಗಿ ನಡೆಸುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಇಂದಿನಿಂದ ನ.22 ರ ವರೆಗೆ ಪರೀಕ್ಷೆ ನಡೆಯುವ ದಿನ ಮತ್ತು ಸಮಯದಲ್ಲಿ ಬೆಂಗಳೂರು ನಗರ ಪೊಲೀಸ್‌‍ ಕಮಿಷನರೇಟ್‌ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ ಸುತ್ತಮುತ್ತಲಿನ ಜೆರಾಕ್‌್ಸ ಅಂಗಡಿಗಳನ್ನು ಮುಚ್ಚುವಂತೆ ನಗರ ಮುಖ್ಯ ಪೊಲೀಸ್‌‍ ಆಯುಕ್ತ ಆರ್‌. ಹಿತೇಂದ್ರ ಅವರು ಆದೇಶಿಸಿದ್ದಾರೆ.

RELATED ARTICLES

Latest News