Homeರಾಜ್ಯನಗರ ಪೊಲೀಸ್‌‍ ಆಯುಕ್ತರ ಕಚೇರಿಯಲ್ಲಿ ಧರಣಿ ಕೈಬಿಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ

ನಗರ ಪೊಲೀಸ್‌‍ ಆಯುಕ್ತರ ಕಚೇರಿಯಲ್ಲಿ ಧರಣಿ ಕೈಬಿಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು,ಅ.15- ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಅವರ ಮನವೊಲಿಕೆ ನಂತರ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌‍ ಮುಖಂಡರು ನಗರ ಪೊಲೀಸ್‌‍ ಆಯುಕ್ತರ ಕಚೇರಿಯ ಮೆಟ್ಟಿಲುಗಳ ಮೇಲೆ ನಡೆಸುತ್ತಿದ್ದ ಧರಣಿಯನ್ನು ಅಂತ್ಯಗೊಳಿಸಿದರು.

ಸ್ಟಿಂಗ್‌ ಆಪರೇಷನ್‌ ಆರೋಪಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸುವುದಾಗಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌‍ ಮುಖಂಡರಿಗೆ ಆಯುಕ್ತರು ಭರವಸೆ ನೀಡಿದರು. ಬಳಿಕ ಧರಣಿ ಕೈಬಿಟ್ಟು ಪೊಲೀಸ್‌‍ ಆಯುಕ್ತರ ಕಚೇರಿಯಿಂದ ಅವರು ನಿರ್ಗಮಿಸಿದರು.

ಸ್ಟಿಂಗ್‌ ಆಪರೇಷನ್‌ ಆರೋಪದ ಬಗ್ಗೆ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಕೆಲಕಾಲ ಕುಮಾರಸ್ವಾಮಿ ಹಾಗೂ ಜೆಡಿಎಸ್‌‍ ಮುಖಂಡರು ಧರಣಿ ನಡೆಸಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಎರಡು ದಿನದಲ್ಲಿ ಸರ್ಕಾರ ತನಿಖೆಗೆ ಆದೇಶ ಮಾಡದಿದ್ದರೆ ಮತ್ತೆ ಧರಣಿ ನಡೆಸುವುದಾಗಿ ಹೇಳಿದರು.

ಸ್ಟಿಂಗ್‌ ಆಪರೇಷನ್‌ ಮಾಡಿದವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು. ಅವರ ಬಗ್ಗೆ ಮಾಹಿತಿ ಇದ್ದರೂ ಮೀನಾಮೇಷ ಏಕೆ?,ಅವರನ್ನು ಕೂಡಲೇ ಬಂಧಿಸಬೇಕು, ಒಂದು ವೇಳೆ ಅವರ ಬಂಧನವಾಗದಿದ್ದರೆ ಮತ್ತೆ ನಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಅವರು ತಿಳಿಸಿದರು.

RELATED ARTICLES
spot_img

Latest News