Homeರಾಜ್ಯಆಸ್ಪತ್ರೆಗಳಲ್ಲಿ ಔಷಧಿ ಕೊರತೆ : ಸರ್ಕಾರದ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

ಆಸ್ಪತ್ರೆಗಳಲ್ಲಿ ಔಷಧಿ ಕೊರತೆ : ಸರ್ಕಾರದ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

Lack of medicines in hospitals: R. Ashok attacks the government

ಬೆಂಗಳೂರು,ಫೆ.12- ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಾಸಿಟಿಮಲ್‌ನಂತಹ ಸಾಮಾನ್ಯ ಜ್ವರದ ಔಷಧಿಯೂ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಡವರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌‍ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ವಿಧಾನಸಭೆಯ
ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ, ಉಗ್ರಾಣದಲ್ಲಿ ಔಷಧಿ ಸ್ಟಾಕ್‌ ಇಲ್ಲ,ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಇಲ್ಲ ಎಂದು ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ಖಾಸಗಿ ಆಸ್ಪತ್ರೆಗಳು ಕೈಗೆಟುಕದೆ ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿ ಚಿಕಿತ್ಸೆಗಾಗಿ ಬರುವ ಬಡ ರೋಗಿಗಳಿಗೆ ಔಷಧಿ ಇಲ್ಲ ಎಂದು ಚೀಟಿ ಬರೆದುಕೊಟ್ಟು ಹೊರಗಡೆ ಮಾರುಕಟ್ಟೆಯಲ್ಲಿ ಖರೀದಿ ಮಾಡಿ ಅಂದರೆ ಅವರು ಏನು ಮಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

ನಿಮ ಸರ್ಕಾರದಲ್ಲಿ ಯಾವುದಾದರೂ ಒಂದು ಇಲಾಖೆಯಾದರೂ ನೆಟ್ಟಗೆ ಕೆಲಸ ಮಾಡುತ್ತಿದೆಯಾ? ಒಬ್ಬ ಸಚಿವರಾದರೂ ನೆಟ್ಟಗೆ ಕೆಲಸ ಮಾಡುತ್ತಿದ್ದಾರಾ? ಕರ್ನಾಟಕದ ಜನತೆ ಪಾಲಿಗೆ ನಿಮ ಸರ್ಕಾರ ಎಂದೋ ಸತ್ತು ಹೋಗಿದೆ ಎಂದು ಅಶೋಕ್‌ ಟೀಕೆ ಮಾಡಿದ್ದಾರೆ.

RELATED ARTICLES

Latest News