Homeರಾಜ್ಯಲಿಡ್ಕರ್‌ ಸಂಸ್ಥೆಯ ಸುವರ್ಣ ಮಹೋತ್ಸವ

ಲಿಡ್ಕರ್‌ ಸಂಸ್ಥೆಯ ಸುವರ್ಣ ಮಹೋತ್ಸವ

ಬೆಂಗಳೂರು, ಅ.27- ಲಿಡ್ಕರ್‌ ಸಂಸ್ಥೆಯ 50ನೆ ಸುವರ್ಣ ಮಹೋತ್ಸವ ಕಾರ್ಯಕ್ರಮ ನಾಳೆ ವಸಂತನಗರದ ಲಿಡ್ಕರ್‌ ಭವನ, ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ.ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್‌) ಸಂಸ್ಥೆಯು 50 ವರ್ಷ ಯಶಸ್ವಿಯಾಗಿ ಪೂರೈಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.

ಬೆಳಗ್ಗೆ 10 ಗಂಟೆಗೆ ಸಂಸ್ಥೆಯ ಬಾಪೂಜಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಉದ್ಘಾಟಿಸಲಿದ್ದು, ಲಿಡ್ಕರ್‌ ಅಧ್ಯಕ್ಷ ಮುಂಡರಗಿ ನಾಗರಾಜ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಕೆ.ಪಿ.ಮೋಹನ್‌ರಾಜ್‌, ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್‌.ನಟರಾಜ್‌, ಆಯುಕ್ತ ಎನ್‌.ಎಂ.ನಾಗರಾಜ್‌, ಇಲಾಖೆ ಸಲಹೆಗಾರ ಇ.ವೆಂಕಟಯ್ಯ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಳೆದ 1976ರಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಡಿ ಆರಂಭಗೊಂಡ ಕರ್ನಾಟಕ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತವು ಸ್ಥಾಪಿತಗೊಂಡು 2010ರಿಂದ ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತವಾಗಿ ಮರು ನಾಮಕರಣಗೊಂಡು 2011ರಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಾಳೆ (ಅ.28) 50 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ನಿಗಮದ ವತಿಯಿಂದ ಆಯೋಜಿಸಲಾಗಿದೆ.

RELATED ARTICLES

Latest News