Thursday, April 16, 2026
Homeರಾಜ್ಯರಾಜ್ಯದ 4 ಕಡೆ ಇಂದು ಬೆಳಂಬೆಳಿಗ್ಗೆ ಲೋಕಾಯುಕ್ತ ದಾಳಿ

ರಾಜ್ಯದ 4 ಕಡೆ ಇಂದು ಬೆಳಂಬೆಳಿಗ್ಗೆ ಲೋಕಾಯುಕ್ತ ದಾಳಿ

Lokayukta raids 4 places in the state this morning

ಬೆಂಗಳೂರು,ಏ.7-ಬೇಸಿಗೆಯ ಬಿಸಿಯ ನಡುವೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 4 ಕಡೆ ಇಂದು ಬೆಳಂಬೆಳಿಗ್ಗೆ ದಾಳಿ ನಡೆಸಿ ಅಕ್ರಮ ಸಂಪತ್ತು ಬಯಲಿಗೆಳೆದಿದ್ದಾರೆ. ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬಳ್ಳಾರಿಯಲ್ಲಿ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಶಿವಣ್ಣ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಬಳ್ಳಾರಿಯ ಕಚೇರಿ, ಸಿದ್ಧಾರ್ಥ್‌ ನಗರದ ಮನೆ ಸೇರಿದಂತೆ ಒಟ್ಟು ನಾಲ್ಕು ಕಡೆ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ. ಸರ್ಕಾರಿ ಬೊಲೆರೋ ಕಾರನ್ನೂ ಬಿಡದೇ ಪರಿಶೀಲನೆ ನಡೆಸಲಾಗುತ್ತಿದೆ.

ಅಲ್ಲಿ ಸಿಕ್ಕ ಕೆಲವು ದಾಖಲೆಗಳನ್ನ ಹೆಕ್ಕಿ ತೆಗೆದು ಪರಿಶೀಲನೆಗೆ ಕೊಂಡೊಯ್ದಿದ್ದಾರೆ. ಎರಡು ತಂಡಗಳಾಗಿ ಲೋಕಾಯುಕ್ತ ಅಧಿ ಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.ಇನ್ನು ಮೈಸೂರಿನಲ್ಲಿ ಲೋಕೋಪಯೋಗಿ ಇಲಾಖೆ ಎಇಇ ರೇವಣ್ಣ ಮನೆ ಹಾಗೂ ಕಚೇರಿಯಲ್ಲಿ ದಾಳಿ ನಡೆದಿದೆ. ಮೈಸೂರಿನ ಕಚೇರಿ ಹಾಗೂ ಮಂಡ್ಯದ ಎರಡು ನಿವಾಸದಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್‌‍ಪಿ ಟಿಜೆ ಉದೇಶ್‌ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್‌ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಿದೆ. ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರದಲ್ಲಿ ದಾಳಿ ಮಾಡಲಾಗಿದೆ.

ಶಿಕಾರಿಪುರ ಪಟ್ಟಣದ ಚೆನ್ನಕೇಶವ ನಗರದಲ್ಲಿನ ಶೋಭಾ ಮನೆ,ತಾಲೂಕಿನ ತರಲಘಟ್ಟ ಬಳಿಯ 4 ಎಕರೆ ತೋಟ ಹಾಗೂ ಾರ್ಮ್‌ ಹೌಸ್‌‍ ಮೇಲೆ ದಾಳಿ ಮಾಡಲಾಗಿದೆ. ಶೋಭಾ ಅವರ ಒಡೆತನದ ಸಾಗರ ತಾಲೂಕಿನ ಅಚಾಪುರ ಬಳಿಯ ಶಾಲೆ ಮೇಲೂ ದಾಳಿ ಮಾಡಲಾಗಿದೆ. ಶಿವಮೊಗ್ಗದ ನಗರದ ನವಿಲೆ ಬಳಿಯ ಮನೆಯಲ್ಲೂ ದಾಖಲೆ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಶಿವಮೊಗ್ಗ ನಗರದ ಕೆಇಬಿ ಸರ್ಕಲ್‌ ಬಳಿಯ ಬಿಸಿಎಂ ಜಿಲ್ಲಾ ಕಚೇರಿ ಮೇಲೂ ದಾಳಿ ಮಾಡಲಾಗಿದೆ.

ಇದಲ್ಲದೆ ಬಿಸಿಎಂ ಇಲಾಖೆಯ ರಾಘವೇಂದ್ರ ಎಂಬವರ ಮನೆ ಮೇಲೆ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶಿವಮೊಗ್ಗ ನಗರದ ಗೋಪಾಳ ಬಳಿಯ ಚಾಲುಕ್ಯನಗರದಲ್ಲಿನ ಮನೆಯಲ್ಲಿ ಬೆಳಗ್ಗೆಯಿಂದಲೂ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. 5 ತಂಡವಾಗಿ ಲೋಕಾಯುಕ್ತ ಅ ಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ದಾವಣಗೆರೆ ಎಸ್ಪಿ ನೇತೃತ್ವದಲ್ಲಿ ಲೋಕಾ ಟೀಂ ದಾಳಿ ನಡೆಸಿದ್ದು, ಶಿವಮೊಗ್ಗ ಜೊತೆಗೆ ಹಾವೇರಿ, ದಾವಣಗೆರೆ ಅಧಿ ಕಾರಿಗಳು ಕೂಡ ಭಾಗಿಯಾಗಿದ್ದಾರೆ.

ಚಿತ್ರದುರ್ಗ,ಏ.7-ನಿವೃತ್ತ ಸರ್ಕಾರಿ ಮಹಿಳಾ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್‌ ಸುಶೀಲಮ ಅವರ ಮನೆ ಸೇರಿ ಹಲವು ಸ್ಥಳಗಳಲಲ್ಲಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಸುಶೀಲಮ ಅವರು ಕಳೆದ ವರ್ಷದ ಹಿಂದೆ ವಿಆರ್‌ಎಸ್‌‍ ಪಡೆದಿದ್ದರು.

ಸೇವೆಯಲ್ಲಿದ್ದಾ ಭ್ರಷ್ಟಾಚಾರ ದೂರು ಬಂದಿತ್ತು ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗದ ಮೆದೇಹಳ್ಳಿ ಬಡಾವಣೆಯ ಮನೆ, ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆ ಮೇಲೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್‌‍, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮನೆಯಲ್ಲಿ ಹಲವು ಆಸ್ತಿ ದಾಖಲಾತಿ ,ಹಾಗು ಭಾರಿ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದ್ದು ಇದರ ಅಂದಾಜು ಮೌಲ್ಯ ಮತ್ತು ಖರೀದಿ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.ಏಕಾಏಕಿ ಲೋಕಾಯುಕ್ತ ಪೊಲೀಸರು ಬಂದಾಗ ಸುಶೀಲಮ ಶಾಕ್‌ ಆಗಿದ್ದಾರೆ.ಸ್ವಯಂ ನಿವೃತ್ತ ಪಡೆದ ಮೇಲೂ ಲೋಕಾ ದಾಳಿ ಕುತೂಹಲ ಕೆರಳಿಸಿದೆ.

RELATED ARTICLES

Latest News