Homeರಾಜ್ಯನಾಲ್ವರು ಅಧಿಕಾರಿಗಳಿಗೆ `ಲೋಕಾ' ಶಾಕ್‌ : 20ಕ್ಕೂ ಹೆಚ್ಚು ಕಡೆ ದಾಳಿ

ನಾಲ್ವರು ಅಧಿಕಾರಿಗಳಿಗೆ `ಲೋಕಾ’ ಶಾಕ್‌ : 20ಕ್ಕೂ ಹೆಚ್ಚು ಕಡೆ ದಾಳಿ

Lokayukta shocks four officials: Raids at over 20 locations

ಬೆಂಗಳೂರು, ಫೆ.12- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾವಣಗೆರೆ, ಬೆಂಗಳೂರು, ಧಾರವಾಡ, ಮೈಸೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ ನಡೆಸಿ ನಾಲ್ವರು ಸರ್ಕಾರಿ ಅಧಿಕಾರಿಗಳ ಅಕ್ರಮ ಸಂಪತ್ತು ಬಯಲಿಗೆಳೆದಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆಂದು ಬಂದ ದೂರುಗಳನ್ನು ಆಧರಿಸಿ ಅದನ್ನು ಖಚಿತಪಡಿಸಿಕೊಂಡು ಬೆಳ್ಳಂಬೆಳಗ್ಗೆ ಸುಮಾರು 20 ಕ್ಕೂ ಹಚ್ಚು ಕಡೆ ಏಕಕಾಲದಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ದಾವಣಗೆರೆಯಲ್ಲಿ ಬೆಸ್ಕಾಂನಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅರ್ಜುನ್‌ ಆರ್‌.ಹೆಚ್‌, ಮೈಸೂರಿನಲ್ಲಿ ಲೋಕೋಪಯೋಗಿ ಇಲಾಖೆ ಮುಖ್ಯಇಂಜಿನಿಯರ್‌ ಪುರುಷೋತ್ತಮ ದಾಸ್‌‍ ,ಬೆಂಗಳೂರಿನಲ್ಲಿ ಕರ್ನಾಟಕ ವಸತಿ ಶಿಕಣ ಇಲಾಖೆ ಸೂಪರಿಂಟೆಂಡೆಂಟ್‌ ಎಂಜಿನಿಯರ್‌ ಹೆಚ್‌.ಎಂ ಜನಾರ್ದನ್‌ ಹಾಗೂ ದಾರವಾಡದ ಸರ್ವೇಯರ್‌ ಸೋಮಲಿಂಗಪ್ಪ ಅವರಿಗೆ ಲೋಕಾ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

ಮುಖ್ಯ ಇಂಜಿನಿಯರ್‌ ಪುರುಷೋತ್ತಮ ದಾಸ್‌‍ ಅವರ ಮೈಸೂರಿಲ್ಲಿರುವ ಮನೆ ,ಕಚೇರಿ ಸೇರಿದಂತೆ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲೇ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ಸಂದರ್ಭದಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಸೇರಿ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿವೆ.

ದಾವಣಗೆರೆಯ ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅರ್ಜುನ್‌ ಅವರು ವಾಸವಿದ್ದ ನಿಟ್ಟುವಳ್ಳಿಯಲ್ಲಿರುವ ಮನೆ ಹಾಗು ಶಿವಮೊಗ್ಗದ ವಿಜಯನಗರ ಮತ್ತು ಗೋಪಾಲಗೌಡ ಬಡಾವಣೆಯಲ್ಲಿರುವ ಮನೆ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಇದಲ್ಲದೆ ಸಾಗರ ತಾಲೂಕಿನ ಆನಂದಪುರ ಸಮೀಪದ ತಳಲೆ ಗ್ರಾಮದಲ್ಲಿ 2.5 ಎಕರೆ ಮತ್ತು 4.5 ಎಕರೆ ವಿಸ್ತೀರ್ಣದ ಬೃಹತ್‌ ಫಾರ್ಮ್‌ ಹೌಸ್‌‍ಗಳ ಮೇಲೂ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಧಾರವಾಡದಲ್ಲಿ ಸರ್ವೇಯರ್‌ ಸೋಮಲಿಂಗಪ್ಪ ಅವರ ಭಾರತಿ ನಗರದ ನಿವಾಸ ಹಾಗೂ ಎಡಿಎಲ್‌ಆರ್‌ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ಆಸ್ತಿ ವಿವರಗಳ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

RELATED ARTICLES

Latest News