ಬೆಂಗಳೂರು,ಸೆ.12- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಇತ್ತೀಚೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಲಕಾರ್ಮಿಕರನ್ನು ಗಮನಿಸಿ ಅಸಮಾಧಾನ ವ್ಯಕ್ತಪಡಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ನಗರ ಪೊಲೀಸರು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಉಸ್ತುವಾರಿಯಲ್ಲಿ 11 ವಿಭಾಗಗಳ ಡಿಸಿಪಿಗಳು ಹಾಗೂ ಸಿಸಿಬಿಯ ಇಬ್ಬರು ಡಿಸಿಪಿಗಳೂ ಸೇರಿದಂತೆ ಒಟ್ಟು 13 ಮಂದಿ ಡಿಸಿಪಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಉಸ್ತುವಾರಿಯಲ್ಲಿ 11 ವಿಭಾಗಗಳ ಡಿಸಿಪಿಗಳು ಹಾಗೂ ಸಿಸಿಬಿಯ ಇಬ್ಬರು ಡಿಸಿಪಿಗಳೂ ಸೇರಿದಂತೆ ಒಟ್ಟು 13 ಮಂದಿ ಡಿಸಿಪಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ಈ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರಮುಖವಾಗಿ ಫ್ಯಾಕ್ಟರಿಗಳು, ಅಂಗಡಿಗಳು, ಗ್ಯಾರೇಜ್, ನಿರ್ಮಾಣ ಹಂತದ ಕಟ್ಟಡ ಹಾಗೂ ಹೋಟೆಲ್‌ಗಳು, ಪೆಟ್ರೋಲ್‌ಬಂಕ್‌ಗಳು, ಮಾಲ್‌ಗಳು ಸೇರಿದಂತೆ ಮುಂತಾದ ಸ್ಥಳಗಳಲ್ಲಿ ದಾಳಿ ಮಾಡಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುತ್ತಿದ್ದಾರೆ.
ಈ ತನಕ ನಗರದಾದ್ಯಂತ 150 ಕ್ಕೂ ಹೆಚ್ಚು ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿರುವ ಪೊಲೀಸರು, ಉತ್ತರ ವಿಭಾಗದಲ್ಲಿ ಒಟ್ಟು 60 ಮಂದಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ರಕ್ಷಣೆ ಮಾಡಿದ್ದಾರೆ. ಸೆ.8 ರಂದು ಬೆಳ್ಳಂಬೆಳಿಗ್ಗೆ ಎಪಿಎಂಸಿ ಮಾರುಕಟ್ಟೆಗೆ ಸಿಎಂ ಡಿ.ಕೆ.ಶಿವಕುಮಾರ್‌ರವರು ಭೇಟಿ ನೀಡಿ ರೈತರು, ಕಾರ್ಮಿಕರು, ವರ್ತಕರ ಸಮಸ್ಯೆಗಳನ್ನು ಆಲಿಸಿದ ಸಂದರ್ಭದಲ್ಲಿ ಬಾಲಕಾರ್ಮಿಕರು ಅಲ್ಲಿ ಇವರ ಕಣ್ಣಿಗೆ ಬಿದ್ದಿದ್ದಾರೆ.
ಇದನ್ನು ಗಂಭೀರವಾಗಿ ಪರಿಗಣಿಸಿದ ಅವರು ಬಾಲಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಿರುವ ಬಗ್ಗೆ ಕ್ರಮ ವಹಿಸುವಂತೆ ಹಾಗೂ ಬಾಲಕಾರ್ಮಿಕರ ರಕ್ಷಣೆ ಮಾಡುವಂತೆ ಸಿಎಂ ಸೂಚಿಸಿದ್ದರು. ಸೂಚನೆ ನೀಡಿದ ಕೆಲವೇ ನಿಮಿಷಗಳಲ್ಲಿ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರು, ಪೊಲೀಸ್ ಆಯುಕ್ತರು, ಇನ್‌್ಸಪೆಕ್ಟರ್ ಹಾಗೂ ಲೇಬರ್ ಇನ್ಸ್ ಪೆಕ್ಟರ್‌ಗಳನ್ನೊಳಗೊಂಡ 5 ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು.
ಅಂದು ಈ ತಂಡಗಳು ಕಾರ್ಯಾಚರಣೆ ನಡೆಸಿ ಹೊರ ರಾಜ್ಯದ ಕಾರ್ಮಿಕರು ಸೇರಿದಂತೆ 19 ಮಂದಿ ಬಾಲಕಾರ್ಮಿಕರನ್ನು ಎಪಿಎಂಸಿಯಲ್ಲಿ ಪತ್ತೆ ಹಚ್ಚಿ ರಕ್ಷಣೆ ಮಾಡಲಾಗಿತ್ತು. ಈ ಸಂಬಂಧ 5 ಪ್ರತ್ಯೇಕ ಪ್ರಕರಣಗಳನ್ನು ಆರ್‌ಎಂಸಿಆರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. ನಗರದಾದ್ಯಂತ ನಡೆಯುತ್ತಿರುವ ಈ ವಿಶೇಷ ಕಾರ್ಯಾಚರಣೆ ಮುಗಿದ ನಂತರ ಎಷ್ಟು ಮಂದಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ. ಎಷ್ಟು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂಬ ನಿಖರ ಅಂಕಿಅಂಶಗಳು ತಿಳಿದುಬರಲಿದೆ.
