Homeರಾಜ್ಯ2ನೇ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗಬಹುದು : ಸಂತೋಷ್‌ ಲಾಡ್‌ ವಿಶ್ವಾಸ

2ನೇ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗಬಹುದು : ಸಂತೋಷ್‌ ಲಾಡ್‌ ವಿಶ್ವಾಸ

May get ministerial berth in 2nd list: Santosh Lad confident

ಬೆಂಗಳೂರು, ಜೂ. 4- ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಸಂತೋಷ್‌ಲಾಡ್‌ ಹೇಳಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಂಪುಟದ ಸಚಿವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಮೊದಲ ಪಟ್ಟಿಯಲ್ಲಿ ತಮ ಹೆಸರಿಲ್ಲದೇ ಇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕ ಜೀವನದಲ್ಲಿ ಇದೆಲ್ಲಾ ಸಹಜ. ರಾಜ್ಯದಲ್ಲಿ ಕೋಟ್ಯಂತರ ಜನರಿದ್ದಾರೆ. ಅವರ ಪೈಕಿ ನಮಗೆ ಸಚಿವರಾಗುವ ಅವಕಾಶ ಸಿಕ್ಕಿತ್ತು ಅದಕ್ಕೆ ಖುಷಿ ಪಡಬೇಕು, ಅವಕಾಶ ಸಿಕ್ಕಾಗ ಕೆಲಸ ಮಾಡಬೇಕು. ಸಿಗದೇ ಇದ್ದಾಗ ಕುಗ್ಗಬಾರದು ಎಂದು ಹೇಳಿದರು.

ಕಾರ್ಮಿಕ ಸಚಿವನಾಗಿ ಎಲ್ಲರಂತೆ ನಾನು ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ತಮಗೆ ಅವಕಾಶ ಸಿಗಲಿದೆ ಎಂಬ ವಿಶ್ವಾಸವಿದೆ. ಆದರೆ ಈ ಬಗ್ಗೆ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ ಹೆಸರು ಕೇಳಿಬಂದಿರುವುದಕ್ಕೆ ಹೆಮೆ ಇದೆ. ನನ್ನ ಹೆಸರು ಆ ಮಟ್ಟಕ್ಕೆ ಬೆಳೆದಿರುವ ಬಗ್ಗೆ ಸಂತೋಷದ ವಿಚಾರ. ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಕೆಪಿಸಿಸಿ ಅಧ್ಯಕ್ಷರಾಗಿರುವುದು ವೈಯಕ್ತಿಕವಾಗಿ ನನಗೆ ಸಂತಸ ತಂದಿದೆ ಎಂದು ತಿಳಿಸಿದರು.

RELATED ARTICLES

Latest News