ಮೈಸೂರು, ಸೆ.26-ನಾಡಹಬ್ಬ ದಸರಾ ಅಂಗವಾಗಿ ಮಾಡುವ ದೀಪಾಲಂಕಾರ ಕಳೆದ ವರ್ಷಕ್ಕಿಂತ ಹೆಚ್ಚು ಆಕರ್ಷಕವಾಗಿ ಮತ್ತು ಹೊಸತನದಿಂದ ಕೂಡಿರಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಕಡಕೊಳದ ಕರ್ನಾಟಕ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಡೆದ ದಸರಾ ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ದಸರಾಗೆ ಅತ್ಯುತ್ತಮವಾಗಿ ದೀಪಾಲಂಕಾರ ಮಾಡಲಾಗಿತ್ತು. ಈ ಬಾರಿ ಅದಕ್ಕಿಂತ ವಿಭಿನ್ನವಾಗಿ, ಲಕ್ಷಾಂತರ ಪ್ರವಾಸಿಗರು ಮೆಚ್ಚುವಂತೆ ದೀಪಾಲಂಕಾರ ರೂಪಿಸಬೇಕು. ದೀಪಾಲಂಕಾರದಿಂದ ವಿದ್ಯುತ್ ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯ ಆರಂಭದಲ್ಲಿ ಸ್ಕೆ್ ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್ ಅವರು ದೀಪಾಲಂಕಾರ, ವಿವಿಧ ವತ್ತಗಳಲ್ಲಿ ನಿರ್ಮಿಸುತ್ತಿರುವ ಕಲಾಕತಿಗಳು ಹಾಗೂ ಡ್ರೋನ್ ಶೋ ಕುರಿತು ಮಾಹಿತಿ ನೀಡಿದರು.
ಯೋಜನೆಗಳಿಗೆ ವೇಗ ನೀಡಲು ಸೂಚನೆ:
ಕುಸುಮ್-ಬಿ ಮತ್ತು ಕುಸುಮ್-ಸಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಸಚಿವರು, ನಿಗದಿತ ಗುರಿ ಸಾಧಿಸಲು ತ್ವರಿತ ಕ್ರಮ ಕೈಗೊಳ್ಳಬೇಕು. ಅಕ್ರಮ-ಸಕ್ರಮ ಯೋಜನೆಯಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದರು.ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಶಾಸಕ ಹಾಗೂ ಸ್ಕೆ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯ್ಯೂಬ್ ಖಾನ್, ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಸ್ಕೆ್ ಎಂಡಿ ಅರ್ಚನಾ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.
400 ಕೆವಿ ಉಪಕೇಂದ್ರ ಪರಿಶೀಲನೆ: ಸಭೆಗೂ ಮುನ್ನ ಸಚಿವ ಕೆ.ಜೆ.ಜಾರ್ಜ್ ಅವರು ಕಡಕೊಳದಲ್ಲಿ ಕೆಪಿಟಿಸಿಎಲ್ ನಿರ್ಮಿಸುತ್ತಿರುವ 400 ಕೆವಿ ಉಪಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲಿಸಿದರು.
