Homeರಾಜ್ಯಸಚಿವರ ವಿವಾದಗಳಿಂದ ಸರ್ಕಾರಕ್ಕೆ ಮುಜುಗರ : ಮತ್ತೊಬ್ಬ ಸಚಿವರ ವಿರುದ್ಧ ಲೋಕಾಯುಕ್ತರಿಗೆ ದೂರು

ಸಚಿವರ ವಿವಾದಗಳಿಂದ ಸರ್ಕಾರಕ್ಕೆ ಮುಜುಗರ : ಮತ್ತೊಬ್ಬ ಸಚಿವರ ವಿರುದ್ಧ ಲೋಕಾಯುಕ್ತರಿಗೆ ದೂರು

ಬೆಂಗಳೂರು, ಸೆ.22- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವರ ಸುತ್ತ ವಿವಾದಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರ್ಕಾರದ ವರ್ಚಸ್ಸಿಗೆ ಮುಜುಗರ ಉಂಟಾಗುತ್ತಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ.ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ದಾಳಿ ಬಳಿಕ, ಗುತ್ತಿಗೆ ವಿಚಾರದಲ್ಲಿ ಲಂಚ ಪಡೆದ ಆರೋಪಗಳನ್ನು ಇಡಿ ಅಧಿಕಾರಿಗಳು ಮಾಡಿದ್ದಾರೆ.

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರ ವಿರುದ್ಧ ಕೆಪಿಎಸ್‌‍ಸಿ ನೇಮಕಾತಿ ವಿಚಾರದಲ್ಲಿ ನಿಯಮ ಉಲ್ಲಂಘನೆಯ ಆರೋಪಗಳನ್ನು ಪ್ರತಿಪಕ್ಷಗಳು ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ.ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರು ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸರ್ಕಾರಕ್ಕೆ ಮತ್ತೊಂದು ಮುಜುಗರದ ಸಂಗತಿಯಾಗಿದೆ.

ಇದೇ ವೇಳೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಹಣದ ದುರುಪಯೋಗದ ಆರೋಪಗಳೂ ಸರ್ಕಾರಕ್ಕೆ ತಲೆ ಬಿಸಿಯಾಗಿದೆ.ಈ ಎಲ್ಲ ಬೆಳವಣಿಗೆಗಳ ನಡುವೆಯೇ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ.

ತಹಸೀಲ್ದಾರ್‌ ಕಚೇರಿ ಆವರಣದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಅಧಿಕಾರಿಗಳು ಕೆಲಸ ಮಾಡಿಕೊಟ್ಟಾಗ ಜನರು ತಮ ಮನಸ್ಸಿಗೆ ಅನುಕೂಲವಾಗುವ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಬಹುದು. ಆದರೆ ಅಧಿಕಾರಿಗಳು ಬಲವಂತವಾಗಿ ಹಣ ಪಡೆಯಬಾರದು ಎಂದು ಹೇಳಿದ್ದರು.

ಸಚಿವರ ಈ ಹೇಳಿಕೆಯನ್ನು ಭ್ರಷ್ಟಾಚಾರಕ್ಕೆ ಪರೋಕ್ಷವಾಗಿ ಪ್ರೋತ್ಸಾಹ ನೀಡುವ ರೀತಿಯ ಹೇಳಿಕೆ ಎಂದು ಟೀಕಿಸಲಾಗಿದೆ. ಈ ಸಂಬಂಧ ಮೈಸೂರಿನ ವಾಯ್‌್ಸ ಆಫ್‌ ಪೀಪಲ್‌‍ ಸಂಸ್ಥೆಯ ಮುಖ್ಯಸ್ಥ ವಸಂತರಾವ್‌ ಚೌಹಾಣ್‌ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಭ್ರಷ್ಟಾಚಾರಕ್ಕೆ ಉತ್ತೇಜನ ನೀಡುವ ರೀತಿಯಲ್ಲಿ ಹೇಳಿಕೆ ನೀಡಿರುವ ಸಚಿವರು ಸಂಪುಟದಲ್ಲಿ ಮುಂದುವರಿಯಲು ಅರ್ಹರಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈಗಾಗಲೇ ಹಲವು ವಿಚಾರಗಳಲ್ಲಿ ಸಚಿವರ ವಿರುದ್ಧ ಆರೋಪಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ಶಿವಲಿಂಗೇಗೌಡ ಅವರ ಹೇಳಿಕೆ ಪ್ರತಿಪಕ್ಷಗಳಿಗೆ ಮತ್ತೊಂದು ಅಸ್ತ್ರವಾಗುವ ಸಾಧ್ಯತೆ ಇದೆ. ನಾಗೇಂದ್ರ ಅವರ ಮಾದರಿಯಲ್ಲಿ ಇನ್ನೂ ಇಬ್ಬರು ಸಚಿವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂಬ ಚರ್ಚೆಯ ನಡುವೆಯೇ ಮತ್ತಷ್ಟು ಸಚಿವರ ಹೆಸರುಗಳು ವಿವಾದಗಳೊಂದಿಗೆ ಕೇಳಿಬರುತ್ತಿವೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಭ್ರಷ್ಟಾಚಾರಕ್ಕೆ ಯಾವುದೇ ಅವಕಾಶವಿಲ್ಲ, ಸ್ವಚ್ಛ ಆಡಳಿತವೇ ಸರ್ಕಾರದ ಆದ್ಯತೆ ಎಂದು ಹಲವು ಬಾರಿ ಹೇಳಿಕೆ ನೀಡಿದ್ದಾರೆ. ಅಧಿಕಾರಿಗಳು ಲಂಚ ಕೇಳಿದರೆ ತಮ ಗಮನಕ್ಕೆ ತರುವಂತೆ ಸಾರ್ವಜನಿಕವಾಗಿ ಮನವಿ ಕೂಡ ಮಾಡಿದ್ದಾರೆ. ಆದರೆ ಇಅದೇ ಸರ್ಕಾರದ ಸಚಿವರೊಬ್ಬರು ಅಧಿಕಾರಿಗಳು ಕೆಲಸ ಮಾಡಿಕೊಟ್ಟ ನಂತರ ಕೃತಜ್ಞತೆ ಸಲ್ಲಿಸುವ ಕುರಿತು ನೀಡಿರುವ ಹೇಳಿಕೆ ಇದೀಗ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

RELATED ARTICLES
spot_img

Latest News