ಚಿಕ್ಕಮಗಳೂರು : ಕಳೆದ ಮೂರು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರಿನಂದಾ (15) ಶವವಾಗಿ ಪತ್ತೆಯಾಗಿದ್ದಾಳೆ.
ಪ್ರಸಿದ್ಧ ಪ್ರವಾಸಿ ತಾಣವಾದ ಮಾಣಿಕ್ಯಾಧಾರಾದಿಂದ ಸುಮಾರು 2 ಸಾವಿರ ಅಡಿಗಳಷ್ಟು ಆಳದ ಪ್ರಪಾತದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಕೇೀರಳದ ಪಾಲಕ್ಕಾಡ್ ಮೂಲದ ಅಪ್ರಾಪ್ತ ಬಾಲಕಿ ಶ್ರೀನಂದಾ ನಾಪತ್ತೆಯಾಗಿ ಮೂರನೇ ದಿನ ಕಳೆದಿತ್ತು.2000 ಅಡಿ ಆಳದಲ್ಲಿ ಶ್ರೀನಂದಾ ಮೃತದೇಹ ಪತ್ತೆಯಾಗಿದೆ.
10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಶ್ರಿನಂದಾ, ತನ್ನ ಕುಟುಂಬದ ಸುಮಾರು 40ಕ್ಕೂ ಹೆಚ್ಚು ಸದಸ್ಯರೊಂದಿಗೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಆಗಮಿಸಿದ್ದಳು. ಮಂಗಳವಾರ ಸಂಜೆ 5.30ರ ಸುಮಾರಿಗೆ ಚಂದ್ರದ್ರೋಣ ಪರ್ವತದ ಮಾಣಿಕ್ಯಾಧಾರಾ ಜಲಪಾತದ ಬಳಿ ಕುಟುಂಬದೊಂದಿಗೆ ಇದ್ದಾಗ ಬಾಲಕಿ ದಿಢೀರ್ ನಾಪತ್ತೆಯಾಗಿದ್ದಳು.
ಮಗಳಿಗಾಗಿ ಗಾಬರಿಯಿಂದ ರಾತ್ರಿ 8 ಗಂಟೆಯವರೆಗೂ ಹುಡುಕಾಡಿದ ಕುಟುಂಬಸ್ಥರು, ಬಳಿಕ ಪೊಲೀಸ್ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬಾಲಕಿ ನಾಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು, ಅಧುನಿಕ ತಂತ್ರಜ್ಞಾನವನ್ನು ಬಳಸಿ ಬಾಲಕಿಯನ್ನು ಪತ್ತೆಹಚ್ಚುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.
ಅದರಂತೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದ್ದವು. ರಾತ್ರಿಯಿಡೀ ಥರ್ಮಲ್ ಡ್ರೋನ್ ಕ್ಯಾಮೆರಾಗಳನ್ನು ಬಳಸಿ ದಟ್ಟ ಕಾಡಿನಲ್ಲಿ ಹುಡುಕಾಟ ನಡೆಸಲಾಗಿತ್ತು.
ಆದರೆ, ದುರಾದೃಷ್ಟವಶಾತ್ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಮಾಣಿಕ್ಯಾಧಾರಾದ ಬಳಿ ಕಾಲು ಜಾರಿ ಸುಮಾರು 2 ಸಾವಿರ ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.. ಪ್ರವಾಸಕ್ಕೆಂದು ಬಂದು ಮಗಳನ್ನು ಕಳೆದುಕೊಂಡ ಕೇರಳದ ಕುಟುಂಬಸ್ಥರು ಕಣ್ಣೀರಿನಲ್ಲಿ ಮುಳುಗಿದ್ದಾರೆ.
41 ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈನಲ್ಲಿ ಅತ್ಯಂತ ಖುಷಿಯಿಂದ ರೀಲ್ಸ್ ಮಾಡಿದ್ದಳು. ಆದರೆ, ಜನದಟ್ಟಣೆಯ ನಡುವೆ ಮೆಟ್ಟಿಲುಗಳನ್ನು ಇಳಿದು ಬರುವಾಗ ಅವಳು ಹಠಾತ್ತನೆ ಕಾಣೆಯಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು.
ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ 5 ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು.
ಬಾಲಕಿಯ ಪತ್ತೆಗಾಗಿ ಎಸ್‍ಡಿಆರ್‍ಎಫ್ , ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಎನ್ ಡಿಆರ್ ಎಪ್ ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾದ್ದರಿಂತ ಮೂರು ದಿನಗಳ ಕಾಲ ನಡೆಸಿದ ತೀವ್ರ ಶೋಧದ ನಂತರ, ಮಾಣಿಕ್ಯಧಾರಾದ ಅತ್ಯಂತ ಆಳವಾದ ಪ್ರಪಾತದ ಕೆಳಗೆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
ಕೇರಳದಿಂದ ಆಗಮಿಸಿದ್ದ ಪೋ ಷಕರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಸದ್ಯ ಸ್ಥಳದಲ್ಲಿ ಅರಣ್ಯ ಇಲಾಖೆ, ಪೊಲೀಸ್ ಹಾಗೂ ಅಗ್ನಿಶಾಮಕ ದಳದ 70ಕ್ಕೂ ಹೆಚ್ಚು ಸಿಬ್ಬಂದಿ ಸತತವಾಗಿ ಶೋಧ ಕಾರ್ಯದಲ್ಲಿ ತೊಡಗಿದ್ದರು. ಕಾರ್ಯಾಚರಣೆಗೆ ಡಾಗ್ ಸ್ಕ್ಯಾಡ್, ಡ್ರೋನ್? ಹಾಗೂ ಥರ್ಮಲ್ ಡ್ರೋನ್‍ಗಳನ್ನು ಬಳಸಲಾಗಿತ್ತು. ಎಸ್‍ಡಿಆರ್‍ಎಫ್ ತಂಡ ಕೂಡ ಕೈ ಜೋಡಿಸಿತ್ತು. ಪ್ರಮುಖವಾಗಿ ಮಾಣಿಕ್ಯಧಾರಾ, ಮಾಣಿಕ್ಯಧಾರಾ ಜಲಪಾತದ ಸುತ್ತಮುತ್ತ, ಗಾಳಿಕೆರೆ ಸೇರಿದಂತೆ, ಗಿರಿ ಪ್ರದೇಶದ ಎಲ್ಲಾ ಭಾಗಗಳಲ್ಲಿಯೂ ಕಾರ್ಯಾಚರಣೆ ನಡೆಸಲಾಗಿತ್ತು.
