Homeರಾಜ್ಯಚುರುಕುಗೊಂಡ ಮುಂಗಾರು, ರಾಜ್ಯದಾದ್ಯಂತ ಅಬ್ಬರಿಸಲಿದೆ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಚುರುಕುಗೊಂಡ ಮುಂಗಾರು, ರಾಜ್ಯದಾದ್ಯಂತ ಅಬ್ಬರಿಸಲಿದೆ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

Monsoon has intensified, will be heavy rain across the state,

ಬೆಂಗಳೂರು,ಜೂ.4- ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಳ್ಳುತ್ತಿದ್ದು, ರಾಜ್ಯದಾದ್ಯಂತ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಚ್ಚರಿಕೆ ನೀಡಿದೆ.ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದ್ದು, ಜೂನ್‌ 9ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಭಾಗಗಳ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಭಾರೀ ಮಳೆಯ ಜೊತೆಗೆ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ರೈತರು, ವಾಹನ ಸವಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಜೂನ್‌ 4ರಿಂದ 12ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಡುಗು, ಮಿಂಚು ಮತ್ತು ಗಂಟೆಗೆ 60 ಕಿ.ಮೀ ವೇಗದ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ನಾಳೆಯಿಂದ 9ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜೂನ್‌ 7ರಿಂದ 9ರವರೆಗೆ ಮಧ್ಯಮದಿಂದ ಭಾರೀ ಮಳೆಯಾಗುವ ಸೂಚನೆ ಇದೆ. ಉತ್ತರ ಕರ್ನಾಟಕದ ಬೆಳಗಾವಿ, ಹಾವೇರಿ, ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೂನ್‌ 5ರವರೆಗೆ ಗಂಟೆಗೆ 40-50 ಕಿ.ಮೀ ವೇಗದ ಬಲವಾದ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂಗಾರು ರೀತಿಯ ಮಳೆ ಆರಂಭವಾಗಿದೆ. ಜೂನ್‌ 8ರಿಂದ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕ ವಾತಾವರಣ ನಿರ್ಮಾಣವಾಗುತ್ತಿದ್ದು, ಜೂನ್‌ 12ರವರೆಗೆ ಉತ್ತಮ ಮಳೆಯ ಸಾಧ್ಯತೆ ಗೋಚರಿಸುತ್ತಿದೆ.

ಹವಾಮಾನ ಇಲಾಖೆಯು ಜನಸಾಮಾನ್ಯರಿಗೆ ಮುನ್ನೆಚ್ಚರಿಕೆ ಸೂಚಿಸಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ರೈತರು ಮತ್ತು ನಿವಾಸಿಗಳು ಎಚ್ಚರಿಕೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಹೋಗುವುದನ್ನು ತಡೆಯುವಂತೆ ಸೂಚಿಸಲಾಗಿದೆ. ಸಂಜೆ ಮತ್ತು ರಾತ್ರಿ ಸಮಯದಲ್ಲಿ ಗುಡುಗು-ಮಿಂಚು ಹೆಚ್ಚಾಗುವುದರಿಂದ ಮರಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸಿ, ಸುರಕ್ಷಿತ ಸ್ಥಳಗಳಲ್ಲಿ ಇರುವುದು ಉತ್ತಮ.

ಈ ಮುಂಗಾರು ಮಳೆಯು ಕೃಷಿ ಚಟುವಟಿಕೆಗಳಿಗೆ ಒಳ್ಳೆಯದಾಗಿದ್ದರೂ, ಬಿರುಗಾಳಿ ಮತ್ತು ಗುಡುಗು ಮಳೆಯಿಂದಾಗಿ ಜನಜೀವನಕ್ಕೆ ಅಡೆತಡೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಹವಾಮಾನ ವರದಿಗಳನ್ನು ನಿರಂತರವಾಗಿ ಗಮನಿಸುತ್ತಾ ಜಾಗರೂಕರಾಗಿರುವುದು ಅಗತ್ಯವಾಗಿದೆ.

11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌
ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆ ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಯೂ ಇದೆ. ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಹವಾಮಾನ ಇಲಾಖೆಯ ಮಾಹಿತಿ ಗಮನಿಸಿ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.

ಕರಾವಳಿ ಭಾಗಗಳಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.ಹವಾಮಾನ ಇಲಾಖೆಯ ಪ್ರಕಾರ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಭಾಗಗಳ ಕೆಲವು ಪ್ರದೇಶಗಳಲ್ಲಿ ಗುಡುಗು-ಮಿಂಚಿನೊಂದಿಗೆ ಆಲಿಕಲ್ಲು ಮಳೆಯಾಗು ಸಾಧ್ಯತೆ ಇದೆ. ಇದರಿಂದ ಕೃಷಿ ಬೆಳೆಗಳಿಗೆ ಹಾನಿಯಾಗುವುದರಿಂದ ರೈತರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

RELATED ARTICLES

Latest News