ಬೆಂಗಳೂರು,ಆ.3- ಲೋಕಭವನದ ಗಾಜೀನ ಮನೆಯಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಇಂದು ಸಂಜೆ ನಡೆಯಲಿರುವ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಅಧಿಕಾರಿಗಳು ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ.
ಲೋಕಭವನ, ತಿಮಯ್ಯ ಸರ್ಕಲ್ ಸೇರಿದಂತೆ ಒಟ್ಟು 12 ಸೆಕ್ಟರ್‌ಗಳನ್ನು ಮಾಡಲಾಗಿದ್ದು, ಪ್ರತಿಯೊಂದು ಸೆಕ್ಟರ್‌ಗಳಲ್ಲಿ ಒಬ್ಬರು ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
12 ಮಂದಿ ಡಿಸಿಪಿಗಳು, ಒಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, ಒಬ್ಬರು ಜಂಟಿ ಪೊಲೀಸ್ ಆಯುಕ್ತರು ಸೇರಿದಂತೆ ಎಸಿಪಿಗಳು, ಇನ್ಸ್ ಪೆಕ್ಟರ್‌ಗಳು ಬಂದೋಬಸ್ತ್‌ನಲ್ಲಿರುತ್ತಾರೆ.
ಯಾವುದೇ ಸಣ್ಣಪುಟ್ಟ ಘಟನೆಗಳು ನಡೆಯದಂತೆ ಬ್ಯಾರಿಕೇಡ್‌ಗಳನ್ನು ಹಾಕಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ.ಈ ಕಾರ್ಯಕ್ರಮದಲ್ಲಿ ಪಾಸ್ ಇರುವವರಿಗೆ ಮಾತ್ರ ಪ್ರವೇಶವಿದೆ. ಈಗಾಗಲೇ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮಾಹಿತಿ ತಿಳಿದ ತಕ್ಷಣ ಹಿರಿಯ ಪೊಲೀಸ್ ಅಧಿಕಾರಿಗಳು ಲೋಕಭವನಕ್ಕೆ ತೆರಳಿ ಸುತ್ತಮುತ್ತ ಪರಿಶೀಲಿಸಿ ಭದ್ರತೆ ಬಗ್ಗೆ ಸೂಕ್ತ ಮಾಹಿತಿ ನೀಡಿದ್ದಾರೆ.
