ಬೆಂಗಳೂರು,ಆ.3-ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನೂತನ ಸಚಿವರುಗಳ ಪ್ರಮಾಣ ವಚನ ಸಮಾರಂಭ ನಿಗದಿಪಡಿಸಿರುವ ಹಿನ್ನಲೆಯಲ್ಲಿ ವಾಹನಗಳ ಸಂಚಾರವನ್ನು ನಿರ್ಭಂದಿಸಲಾಗಿದೆ. ಈ ಸಮಾರಂಭಕ್ಕೆ ಗಣ್ಯಾತಿಗಣ್ಯರು ಹಾಗೂ ಗಣ್ಯರು ಪಾಲ್ಗೊಳ್ಳಲು ಆಗಮಿಸುವ ಸಾಧ್ಯತೆ ಇದೆ.ಆಹ್ವಾನಿಕರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ.
ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಿಮಿತ್ತ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಇಂದು ಸಂಜೆಯಿಂದ ರಾತ್ರಿ 10 ಗಂಟೆವರೆಗೆ ಸಂಚಾರ ಮಾರ್ಪಾಡು ಮಾಡಲಾಗಿದೆ.
ಕಬ್ಬನ್ ರಸ್ತ್ತೆಯ ಬಿ.ಆರ್.ವಿ ಜಂಕ್ಷನ್ ನಿಂದ ಸಿ.ಟಿ.ಓ.ಜಂಕ್ಷನ್ ವರೆಗೆ ಹಾಗೂ ಸಿ.ಟಿ.ಓ. ವೃತ್ತದಿಂದ ಲೋಕಭವನದವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಭಂದಿಸಲಾಗಿದೆ.
ಬಾಳೇಕುಂದ್ರಿ ಜಂಕ್ಷನ್‌ನಿಂದ ಅಂಬೇಡ್ಕರ್ ರಸ್ತೆ ಕಡೆಗೆ ಬರುವ ವಾಹನಗಳನ್ನು ಹೊರತು ಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಭಂದಿಸಲಾಗಿದೆ.
ಅಂಬೇಡ್ಕರ್ ರಸ್ತೆಯಲ್ಲಿ ಕೆಆರ್ ಸರ್ಕಲ್ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್ ವರೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತು ಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಭಂದಿಸಲಾಗಿದೆ.
ಕ್ವೀನ್‌್ಸ ಜಂಕ್ಷನ್ ಕಡೆಯಿಂದ ಸಿಟಿಓ ಕಡೆಗೆ ಕಾರ್ಯಕ್ರಮದಲ್ಲಿ ಸಂಚರಿಸುವ ವಾಹನ ಹೊರತು ಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ.ಕ್ವೀನ್‌್ಸ ಜಂಕ್ಷನ್‌ನಲ್ಲಿ ಸೆಂಟ್ ಮಾರ್ಕ್ಸ್ ರಸ್ತೆಯಿಂದ ಸಿಟಿಓ ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಭಂದಿಸಲಾಗಿದೆ.
ವಾಹನಗಳ ನಿಲುಗಡೆ: ವಿಧಾನಸೌಧದ ಸಿಮೆಂಟ್ ಪಾರ್ಕಿಂಗ್ ಸ್ಥಳ ಹಾಗೂ ವಿಕಾಸಸೌಧದ ಸುತ್ತಮುತ್ತ, ರಾಜಭವನ ಹಿಂಭಾಗದ ಎಲ್ ಹೆಚ್ ವಾಹನ ನಿಲುಗಡೆ ಸ್ಥಳ, ನೆಹರೂ ತಾರಾಲಯದ ಆವರಣದಲ್ಲಿ ವಾಹನಗಳು ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಪಾಸ್ ಹೊಂದಿಲ್ಲದ ವಾಹನಗಳು: ಕೊಂಡಜ್ಜಿ ಭವನ ಆವರಣ, ಶಿವಾಜಿನಗರ ಬಸ್‌ನಿಲ್ದಾಣದ ಮೇಲ್ಭಾಗದ ಮಲ್ಟಿಲೆವೆಲ್ ಪಾರ್ಕಿಂಗ್ ಸ್ಥಳ, ಕಂಠೀರವ ಕ್ರೀಡಾಂಗಣ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಸರ್ಕಾರಿ ಕಲಾ ಕಾಲೇಜು ಆವರಣ, ಕಾರ್ಪೋರೇಷನ್ ಕಚೇರಿ ಸ್ಥಳ, ಪ್ಯಾಲೇಸ್ ಮೈದಾನದ ಗೇಟ್ ನಂ. 2,3 ಮತ್ತು 4 ರಲ್ಲಿ ಪಾಸ್ ಹೊಂದಿಲ್ಲದ ವಾಹನಗಳನ್ನು ನಿಲುಗಡೆ ಮಾಡಬಹುದಾಗಗಿದೆ.
ಸಾರ್ವಜನಿಕರು ತಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಂಡು ನಿರ್ಬಂಧಿತ ಮಾರ್ಗಗಳಲ್ಲಿ ತಮ ಪ್ರಯಾಣವನ್ನು ತಪ್ಪಿಸಿ ಸೂಚಿಸಲಾದ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.
