Homeರಾಜ್ಯದಸರಾದಲ್ಲಿ ಕಂಬಳದ ಅಗತ್ಯವಿಲ್ಲ : ಹೆಚ್‌.ಡಿ.ಕುಮಾರಸ್ವಾಮಿ

ದಸರಾದಲ್ಲಿ ಕಂಬಳದ ಅಗತ್ಯವಿಲ್ಲ : ಹೆಚ್‌.ಡಿ.ಕುಮಾರಸ್ವಾಮಿ

No need for Kambala in Dasara: H.D. Kumaraswamy

ಬೆಂಗಳೂರು,ಜು. 11- ಪರಂಪರಾಗತ ವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದುವರೆಗೆ ನಡೆದುಕೊಂಡು ಬಂದಿರುವ ದಸರಾ ಉತ್ಸವಕ್ಕೆ ಧಕ್ಕೆ ತರುವ ಪ್ರಯತ್ನ ಖಂಡಿತಾ ಬೇಡ ಎಂದಿದ್ದಾರೆ.

ಕಂಬಳವು ಕರಾವಳಿ ಭಾಗದ ಸಾ್ಕೃಂತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ. ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಆಗಿದೆ. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು ಎಂದು ಅವರು ಹೇಳಿದ್ದಾರೆ.

ಕರಾವಳಿ ಪ್ರದೇಶ ಹಸಿರು ಮತ್ತು ನೀರಿನ ಸಂಗಮ. ಇಂತಹ ಪ್ರಾಕೃತಿಕ ಹಿನ್ನೆಲೆಯಲ್ಲಿ ಕಂಬಳವನ್ನು ಕಣ್ತುಂಬಿಕೊಳ್ಳುವುದೇ ಧನ್ಯತೆಯ ಅನುಭವ ಎನ್ನುವುದು ನನ್ನ ಭಾವನೆ. ಹೀಗಾಗಿ ಮೈಸೂರು ಮತ್ತು ಕರಾವಳಿ ಭಾಗದ ಜನರಿಗೆ ನೋವುಂಟು ಮಾಡುವುದು ಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.

RELATED ARTICLES
spot_img

Latest News