Thursday, December 18, 2025
Homeರಾಜ್ಯಮೊಟ್ಟೆ ಬಗ್ಗೆ ಆತಂಕಪಡುವ ಅಗತ್ಯವಿಲ್ಲ : ಸಚಿವ ಗುಂಡೂರಾವ್‌ ಸ್ಪಷ್ಟನೆ

ಮೊಟ್ಟೆ ಬಗ್ಗೆ ಆತಂಕಪಡುವ ಅಗತ್ಯವಿಲ್ಲ : ಸಚಿವ ಗುಂಡೂರಾವ್‌ ಸ್ಪಷ್ಟನೆ

No need to worry about eggs: Minister Gundurao clarifies

ಬೆಳಗಾವಿ,ಡಿ.18- ಮೊಟ್ಟೆ ತಿನ್ನುವುದರ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್‌ ವಿಧಾನಸಭೆಯಲ್ಲಿ ಭರವಸೆ ನೀಡಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ವಿ.ಸುನೀಲ್‌ಕುಮಾರ್‌ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಕಳೆದ ವರ್ಷ 147 ಮೊಟ್ಟೆ ಮಾದರಿಗಳನ್ನು ಪರೀಕ್ಷಿಸಲಾಗಿತ್ತು.

ಒಂದು ಹೊರತುಪಡಿಸಿ ಉಳಿದೆಲ್ಲವೂ ಗುಣಮಟ್ಟದಿಂದ ಕೂಡಿದ್ದವು ಎಂದರು. ಮೊಟ್ಟೆಯ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಮೊಟ್ಟೆಯನ್ನು ಶಾಲಾ ಮಕ್ಕಳಿಗೆ ಕೊಡಬಹುದು, ತಿನ್ನಬಹುದು, ಆರೋಗ್ಯಕರವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

RELATED ARTICLES

Latest News