ಹುಬ್ಬಳ್ಳಿ, ಸೆ.26- ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ನಗರದ ಡಿಪೋ ಆವರಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುಂಡರಗಿ ಮೂಲದ ಮಂಜುನಾಥ್ (ಹೆಸರು) ಆತ್ಮಹತ್ಯೆ ಮಾಡಿಕೊಂಡಿರುವ ಬಸ್ ಚಾಲಕ.
ತಡರಾತ್ರಿ ನಗರದ ಗ್ರಾಮೀಣ ಘಟಕ-1ರ ಆವರಣದಲ್ಲಿರುವ ಮರಕ್ಕೆ ಮಂಜುನಾಥ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗಿನ ಜಾವ ಘಟನೆ ಬೆಳಕಿಗೆ ಬಂದಿದೆ.
ಮಂಜುನಾಥ್ ಅವರು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ನೇಣಿನ ಕುಣಿಕೆಯಿಂದ ಮೃತದೇಹವನ್ನು ಕೆಳಗಿಳಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
