ಬೆಂಗಳೂರು, ಅ.14-ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕೃಷ್ಣರಾಜಸಾಗರದ ಬೃಂದಾವನ ಉದ್ಯಾನವನದಲ್ಲಿ (ಕೆಆರ್ಎಸ್) ಅ.16 ರಿಂದ ನಡೆಯುಲಿರುವ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಜಲಸಂಪನೂಲ ಸಚಿವ ಎನ್.ಚಲುವರಾಯಸ್ವಾಮಿ ಅವರು ಜಿಲ್ಲಾಡಳಿತದೊಂದಿಗೆ ಇಂದು ಆಹ್ವಾನಿಸಿದರು.
ಜಲಸಂಪನೂಲ ಇಲಾಖೆಯ ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅ. 16 ರಿಂದ 21 ರವರೆಗೆ ನಡೆಯಲಿದೆ. ಅ.16 ರ ಸಂಜೆ 6.00 ಗಂಟೆಗೆ ನಡೆಯಲಿರುವ ಕಾವೇರಿ ಆರತಿಗೆ ಮುಖ್ಯಮಂತ್ರಿಗಳು, ಸಚಿವರು ಚಾಲನೆ ನೀಡಲಿದ್ದಾರೆ.
ಅ.21 ರ ವರೆಗೆ ಪ್ರತಿ ದಿನ ಸಂಜೆ 6 ಗಂಟೆಗೆ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಈ ವೇಳೆ ಶ್ರೀ ರಂಗಪಟ್ಟಣದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಉಪಸ್ಥಿತರಿದ್ದರು.
