Thursday, April 16, 2026
Homeರಾಜ್ಯಬಿಜೆಪಿ ಅವಧಿಯ ಬಿಲ್‌ಗಳು ಮಾತ್ರ ಬಾಕಿ ಉಳಿದಿವೆ : ಸಿಎಂ

ಬಿಜೆಪಿ ಅವಧಿಯ ಬಿಲ್‌ಗಳು ಮಾತ್ರ ಬಾಕಿ ಉಳಿದಿವೆ : ಸಿಎಂ

Only bills from the BJP period are pending: CM

ಬೆಂಗಳೂರು, ಜ.30- ಹಿಂದಿನ ಬಿಜೆಪಿ ಸರ್ಕಾರ ಬಾಕಿ ಉಳಿಸಿರುವ ಬಿಲ್‌ ಗಳು ಮಾತ್ರ ಉಳಿದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹುತಾತ ದಿನಾಚರಣೆ ಅಂಗವಾಗಿ ವಿಧಾನಸೌಧದ ಬಳಿ ಮಹಾತಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಗುತ್ತಿಗೆದಾರರ ಸಂಘದವರು ಮಾಹಿತಿ ನೀಡಿರುವ ಬಾಕಿ ಬಿಲ್ಲುಗಳು ಹಿಂದಿನ ಬಿಜೆಪಿ ಸರ್ಕಾರ ಪಾವತಿಸದೇ ಬಿಟ್ಟುಹೋಗಿರುವುದಾಗಿದೆ ಎಂದರು. ಮಹಾತಾಗಾಂಧೀಜಿ ಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸರಿಸಲಾಗುತ್ತಿದೆ.

ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ.80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸ್ವಾವಲಂಬಿಯಾಗಬೇಕು. ಗ್ರಾಮಗಳ ಪ್ರಗತಿಯಲ್ಲಿಯೇ ದೇಶದ ಪ್ರಗತಿ ಅಡಗಿದೆ ಎಂದು ಅವರು ನುಡಿದಿದ್ದರು.

ರಾಜ್ಯದಲ್ಲಿ ಸುಮಾರು 6 ಸಾವಿರ ಪಂಚಾಯ್ತಿಗಳಿವೆ. ಅವುಗಳಿಗೆ ಮಹಾತಾಗಾಂಧಿಯವರ ಹೆಸರು ಇಡಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ. ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದರು. ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು .ಗಾಂಧೀಜಿಯವರ ಕೊಡುಗೆಯನ್ನು ಇಡೀ ದೇಶ ಸರಿಸುತ್ತದೆ.

ಇಂತಹ ಮಹಾನ್‌ ಚೇತನ ಗುಂಡೇಟಿಗೆ ಬಲಿಯಾಗಿ ನಮನ್ನ ಅಗಲಿದ್ದಾರೆ. ಅವರ ಅಭಿಮಾನಿಯೊಬ್ಬರು- ಗಾಂಧೀಜಿಯವರು 100 ವರ್ಷ ಬದುಕಬೇಕೆಂದು ಹಾರೈಸಿದ್ದಕ್ಕೆ, ಗಾಂಧೀಜಿಯವರು ನಾನು 125 ವರ್ಷಗಳು ದೇಶಕ್ಕಾಗಿ ಬದುಕಲಿಚ್ಛಿಸುತ್ತೇನೆ ಎಂದು ಉತ್ತರಿಸಿದ್ದರು. ಇಡೀ ದೇಶ ಅವರ ಕೊಡುಗೆಯನ್ನು ಸರಿಸುತ್ತದೆ ಎಂದರು.

RELATED ARTICLES

Latest News