ಬೆಂಗಳೂರು,ಮಾ.6- ಕೇಂದ್ರ ಸರ್ಕಾರದ ಉದ್ದೇಶಿತ ವಿಬಿಜಿ ರಾಮ್‌ಜಿ ಯೋಜನೆ ತಿದ್ದುಪಡಿ ವಿಧಾನಸೌಧದಲ್ಲಿ ಪ್ರತಿಧ್ವನಿಸಿ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ಪ್ರಸಂಗ ಜರುಗಿತು. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರವು ವ್ಯವಸ್ಥಿತವಾಗಿ ದುರ್ಬಲಗೊಳಿಸಿ ಜನರ ಉದ್ಯೋಗದ ಹಕ್ಕುಗಳನ್ನು ಮೊಟಕುಗೊಳಿಸಿದೆ.
ರಾಜ್ಯದ ಆರ್ಥಿಕ ಹೊರೆ ಇನ್ನಷ್ಟು ಹೆಚ್ಚಲಿದೆ. ಈ ಕಾರಣಗಳಿಂದ ರಾಜ್ಯದ ಹಿತಾಸಕ್ತಿಗಾಗಿ ಪಕ್ಷಾತೀತವಾಗಿ ಒಗ್ಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲೇಬೇಕೆಂದು ಕರೆಕೊಟ್ಟರು. ಆಗ ಪ್ರತಿಪಕ್ಷಗಳ ಸದಸ್ಯರು ಆಕ್ಷೇಪಿಸಿ ಮನೇಗ್ರಾ ತಿದ್ದುಪಡಿಯಿಂದ ಯಾವುದೇ ರೀತಿಯ ಅನ್ಯಾಯವಾಗುವುದಿಲ್ಲ ಎಂದು ತಿರುಗೇಟು ನೀಡಿದರು.
ಈ ವೇಳೆ ಸಭಾಧ್ಯಕ್ಷರಾದ ಖಾದರ್ ಪ್ರತಿಪಕ್ಷಗಳ ಸದಸ್ಯರನ್ನು ಸಮಾಧಾನಪಡಿಸಿದರು. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಮ ಸರ್ಕಾರ ಶಕ್ತಿ ಮೀರಿ ಶ್ರಮಿಸುತ್ತಿದ್ದರೂ ಕೇಂದ್ರ ಸರ್ಕಾರವು ಒಕ್ಕೂಟ ತತ್ವದ ಸಾಂವಿಧಾನಿಕ ನಿಯಮಗಳನ್ನು ಪಾಲಿಸದೆ ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳನ್ನು ತನ್ನ ಪಾಲಿನ ಕಡಿತ, ಕೇಂದ್ರದ ಯೋಜನೆಗಳಲ್ಲಿ ತಾರತಮ್ಯ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ತೆರಿಗೆ ಹಂಚಿಕೆಯಲ್ಲಿನ ಅನ್ಯಾಯದ ಬಗ್ಗೆ 15ನೇ ಹಣಕಾಸು ಆಯೋಗ ಮಾಡಿದ್ದ ವಿಶೇಷ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಅನುಷ್ಠಾನ ಮಾಡದ ಕಾರಣ, ಉಂಟಾದ ಆರ್ಥಿಕ ನಷ್ಟ, ಜಿಎಸ್‌ಟಿ ದರಗಳನ್ನು ತರ್ಕಬದ್ಧಗೊಳಿಸುವ ನಿರ್ಧಾರದಿಂದ ರಾಜ್ಯದ ಬೊಕ್ಕಸದ ಮೇಲೆ ಹೆಚ್ಚುವರಿ ಹೊರೆ ಬಿದಿದ್ದು, ಅದರ ಒತ್ತಡವನ್ನು ನಿಭಾಯಿಸುವುದು ಸವಾಲಿನ ಕೆಲಸವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಢಿಸಿ ಅನುಷ್ಠಾನಗೊಳಿಸುವ ನಮ ಸಂಕಲ್ಪವನ್ನು ಈ ಆಯವ್ಯಯ ದೃಢಪಡಿಸುತ್ತದೆ. ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ಆರ್ಥಿಕ ಬೆಳವಣಿಗೆಯೊಂದಿಗೆ ವಿತ್ತೀಯ ಶಿಸ್ತು ಪಾಲಿಸಲು ಸಾಧ್ಯವಾಗಿರುವುದು ನಮ ಆಡಳಿತ ವಿಧಾನದ ಮಾದರಿಯಾಗಿದೆ ಎಂದರು. ಈ ಆಯವ್ಯಯವು ನಾಡಿನ ಉಜ್ವಲ ಭವಿಷ್ಯ ಕಟ್ಟುವ ದೃಷ್ಟಿಯಿಂದ ರೂಪಿಸಲಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಶ್ರಮಿಸುವುದು ನಮೆಲ್ಲರ ಕರ್ತವ್ಯವಾಗಿದೆ ಎಂದು ಸಿಎಂ ಸಲಹೆ ಮಾಡಿದರು.
