Homeರಾಜ್ಯಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾವಯವ ಸಿರಿಧಾನ್ಯ ನಮ್ಮ ಹೆಮ್ಮೆ : ಸಚಿವ ಚಲುವರಾಯಸ್ವಾಮಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾವಯವ ಸಿರಿಧಾನ್ಯ ನಮ್ಮ ಹೆಮ್ಮೆ : ಸಚಿವ ಚಲುವರಾಯಸ್ವಾಮಿ

Organic cereals are our pride at the international level: Minister Chaluvarayaswamy

ಬೆಂಗಳೂರು,ಫೆ.4- ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮೆಲ್ಲರ ಹೆಮೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ತಿಳಿಸಿದರು.

ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಕೃಷಿ ಇಲಾಖೆ ಸಮೃದ್ಧಿ ಸಭಾಂಗಣದಲ್ಲಿ ಆಯೋಜಿಸಿದ್ದ, ಉತ್ಪಾದನೋತ್ತರ ಕೃಷಿ- ರೈತರ ಸಬಲೀಕರಣ ಅಂತಾರಾಷ್ಟ್ರೀಯ ಸಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ವರ್ಷ 2025ರಲ್ಲಿ ನಡೆದ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳದಲ್ಲಿ ಲಕ್ಷಾಂತರ ರೈತರು, ಸಾರ್ವಜನಿಕರು ಭಾಗವಹಿಸಿ ಮೇಳದ ಯಶಸ್ಸಿಗೆ ಕಾರಣರಾದರಲ್ಲದೆ ಯುವ ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಹಾಗೂ ಸಿರಿಧಾನ್ಯಗಳನ್ನು ನಮ ಆಹಾರ ಪದ್ಧತಿಯಲ್ಲಿ ಅವಳವಡಿಸಿಕೊಳ್ಳಲು ಈ ಹಿಂದಿನ ಮೇಳಗಳು ಯಶಸ್ಸುಕಂಡಿವೆ ಎಂದರು.

ಈ ವರ್ಷ ನಮ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದೇಶದಲ್ಲಿ ಪ್ರಥಮವಾಗಿ ಉತ್ಪಾದನೋತ್ತರ ಕೃಷಿ-ರೈತರ ಸಬಲೀಕರಣ ಎಂಬ ಧ್ಯೇಯ ವಾಕ್ಯದೊಂದಿಗೆ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ಇದೇ 6, 7 ಮತ್ತು 8 ರಂದು ಅರಮನೆ ಮೈದಾನದಲ್ಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಹಿಂದೆ ನಮ ದೇಶ ಆಹಾರ ಪದಾರ್ಥಗಳನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇತ್ತು. ಇಂದು ಬದಲಾದ ಸನ್ನಿವೇಶದಲ್ಲಿ ನಮ ದೇಶ ಆಹಾರ ಉತ್ಪಾದನೆಯಲ್ಲಿ ಪ್ರಗತಿ ಸಾಧಿಸಿದ್ದು ಇತರ ರಾಷ್ಟ್ರಗಳಿಗೆ ರಫ್ತು ಮಾಡುತ್ತಿದ್ದೇವೆ. ಹಾಗೆಯೇ ಅಕ್ಕಿ ಉತ್ಪಾದನೆಯಲ್ಲಿ ಚೀನಾ ದೇಶವನ್ನು ಹಿಂದಕ್ಕೆ ಹಾಕಿರುವುದಾಗಿ ತಿಳಿಸಿದರು.

ಇನ್ನು ಈ ಬಾರಿಯ ಅಂತರರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಕೃಷಿ ಪರಿಸರ ವಿಜ್ಞಾನ, ಹಾಗೂ ಬ್ರ್ಯಾಂಡಿಂಗ್‌ ಎಂಬ ಮೂರು ಉಪ ಧ್ಯೇಯಗಳೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಉತ್ಪಾದನೆ ನಂತರ, ರೈತರಿಗೆ ನಿರಂತರ ಆದಾಯ ದೊರಕಿಸುವ ಸಲುವಾಗಿ ಕೃಷಿ ತ್ಯಾಜ್ಯಗಳ ಮರುಬಳಕೆ, ದೇಸಿ ತಳಿಗಳ ಸಂರಕ್ಷಣೆ, ಭೌಗೋಳಿಕ ಸೂಚ್ಯಾಂಕವಿರುವ ಉತ್ಪಾದನೆಗಳನ್ನು ಬಳಸುವ ಬಗ್ಗೆ ನಮ ಸರ್ಕಾರದಿಂದ ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ. ಕೃಷಿ ಉತ್ಪಾದನೆ ನಂತರ ಮೌಲ್ಯವರ್ಧನೆಗೆ ಒತ್ತು ಕೊಡಲು ಈಗಾಗಲೇ ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪಿಸಿದ್ದು, ಅದರ ಮೂಲಕ ರೈತರು ಕೃಷಿ ಸಂಸ್ಕರಣೆ ಮಾಡಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಇಂದು ಈ ವಿಷಯಗಳ ಬಗ್ಗೆ ಚರ್ಚಿಸಲು ಜರ್ಮನಿ, ಅಮೆರಿಕಾ, ವಿಯೆಟ್ನಾಮ್‌‍, ಕಾಂಬೋಡಿಯಾ ಹಾಗೂ ನಮ ದೇಶದ ವಿವಿಧ ಭಾಗಗಳಿಂದ ಬಂದ 35ಕ್ಕಿಂತ ಹೆಚ್ಚು ತಜ್ಞರು, ನಮ ರಾಜ್ಯದಿಂದ ಬಂದ ರೈತರು ಎಲ್ಲರೂ ಈ ಚರ್ಚೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸಿಯಾಗಿ ಮಾಡುತ್ತೀರೆಂದು ಭಾವಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹನ್‌್ಸ ಜುರ್ಗೆನ್‌ ಕ್ಲೆನ್‌, ನರ್ಮಾತ ಶರ್ಮಾ – ಪ್ರಾಜೆಕ್ಟ್‌ ಮ್ಯಾನೇಜರ್‌, ಕೃಷಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್‌, ಆಯುಕ್ತ ವೈ.ಎಸ್‌‍.ಪಾಟೀಲ್‌‍, ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಯು.ಪಿ.ಸಿಂಗ್‌ ಸೇರಿದಂತೆ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಗಣ್ಯರು ಭಾಗವಹಿಸಿದ್ದರು.

RELATED ARTICLES

Latest News