Homeರಾಜಕೀಯಬಿಜೆಪಿ ಸೇರಲು 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ರೆಡಿಯಾಗಿದ್ದಾರೆ : ವಿಜಯೇಂದ್ರ ಹೊಸ ಬಾಂಬ್

ಬಿಜೆಪಿ ಸೇರಲು 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ರೆಡಿಯಾಗಿದ್ದಾರೆ : ವಿಜಯೇಂದ್ರ ಹೊಸ ಬಾಂಬ್

ಬೆಂಗಳೂರು, ಅ.12- ಒಂದು ವೇಳೆ ರಾಜ್ಯದಲ್ಲಿ ನಾಳೆಯೇ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್‌‍ನಿಂದ ಸಚಿವರು ಮತ್ತು ಶಾಸಕರೂ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯೇ ಚುನಾವಣೆ ಘೋಷಣೆಯಾದರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಸಂಪುಟದ 20ರಿಂದ 25 ಸಚಿವರು ಹಾಗೂ ಹಲವು ಶಾಸಕರು ಬಿಜೆಪಿಗೆ ಸೇರುವಂತಹ ವಾತಾವರಣ ಈಗಾಗಲೇ ನಿರ್ಮಾಣವಾಗಿದೆ. ಕಾಂಗ್ರೆಸ್‌‍ನ ಆಂತರಿಕ ಬೆಳವಣಿಗೆಗಳು ಮತ್ತು ಅಧಿಕಾರದ ಪೈಪೋಟಿಯ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸಬಹುದು ಎಂಬ ಸುಳಿವನ್ನು ನೀಡಿದರು.

ಕಾಂಗ್ರೆಸ್‌‍ನಲ್ಲಿ ಅಧಿಕಾರಕ್ಕಾಗಿ ಕೆಲವರು ಸ್ಟಿಂಗ್‌ ಆಪರೇಷನ್‌ ನಡೆಸುತ್ತಿದ್ದಾರೆಂಬ ಚರ್ಚೆ ನಡೆಯುತ್ತಿದ್ದು, ಈ ರೀತಿಯ ರಾಜಕಾರಣ ರಾಜ್ಯದ ರಾಜಕೀಯ ವ್ಯವಸ್ಥೆಗೆ ಒಳ್ಳೆಯದಲ್ಲ. ರಾಜ್ಯ ರಾಜಕಾರಣ ಈ ಮಟ್ಟಕ್ಕೆ ಇಳಿಯಬಾರದಿತ್ತು. ಇತ್ತೀಚಿನ ದಿನಗಳಲ್ಲಿ ಸ್ಟಿಂಗ್‌ ಆಪರೇಷನ್‌ ಮತ್ತು ವಿವಿಧ ರೀತಿಯ ಕಾರ್ಯಾಚರಣೆಗಳ ಕುರಿತು ನಡೆಯುತ್ತಿರುವ ಚರ್ಚೆಗಳು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕದ ರಾಜಕಾರಣ ಈ ಮಟ್ಟಕ್ಕೆ ಹೋಗಿರಲಿಲ್ಲ. ರಾಜಕಾರಣಿಗಳ ಬಗ್ಗೆ ಜನರು ಅಸಹ್ಯಪಡುವ ರೀತಿಯಲ್ಲಿ ಮಾತುಕತೆಗಳು ನಡೆಯುತ್ತಿವೆ. ಕಾಂಗ್ರೆಸ್‌‍ ಪಕ್ಷದಲ್ಲಿ ಕೆಲವರು ಅಧಿಕಾರವನ್ನು ಕಸಿದುಕೊಳ್ಳಲು ಸ್ಟಿಂಗ್‌ ಆಪರೇಷನ್‌ ಮಾಡಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಕೆಲವರು ಸಚಿವರಾಗಲು, ಇನ್ನು ಕೆಲವರು ಮುಖ್ಯಮಂತ್ರಿಯಾಗಲು ಇಂತಹ ಪ್ರಯತ್ನಗಳನ್ನು ನಡೆಸಿದ್ದಾರೆ ಎನ್ನಲಾಗುತ್ತಿದೆ ಎಂದು ಅವರು ಆರೋಪಿಸಿದರು.

ದೆಹಲಿಯಲ್ಲಿ ಕಾಂಗ್ರೆಸ್‌‍ ನಡೆಸುತ್ತಿರುವ ಪ್ರತಿಭಟನೆ ಮತ್ತು ರಾಹುಲ್‌ ಗಾಂಧಿ ಅವರ ನಡೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸುಪ್ರೀಂಕೋರ್ಟ್‌ನಲ್ಲಿ ವಿಚಾರಗಳು ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡುವ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌‍ ನಾಯಕರು ನಾಟಕ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌‍ನ ಹೋರಾಟಗಳು, ಹೇಳಿಕೆಗಳು ಮತ್ತು ನಡವಳಿಕೆಗಳನ್ನು ಗಮನಿಸಿದರೆ ಪಕ್ಷವು ಸಂಪೂರ್ಣ ಹತಾಶ ಸ್ಥಿತಿಯಲ್ಲಿದೆ. ದೇಶದಲ್ಲಿ ಅರಾಜಕತೆಯ ವಾತಾವರಣ ಸೃಷ್ಟಿಸಲು ಕಾಂಗ್ರೆಸ್‌‍ ಪ್ರಯತ್ನಿಸುತ್ತಿದೆ ಎಂಬ ಗಂಭೀರ ಆರೋಪ ಮಾಡಿದರು.

ಶ್ರೀಲಂಕಾ ಸೇರಿದಂತೆ ಕೆಲವು ದೇಶಗಳಲ್ಲಿ ಯುವಕರು ವ್ಯವಸ್ಥೆಯ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ ರೀತಿಯಲ್ಲಿ ಭಾರತದಲ್ಲಿಯೂ ಪರಿಸ್ಥಿತಿ ಸೃಷ್ಟಿಸಲು ಕಾಂಗ್ರೆಸ್‌‍ ನಾಯಕರು ಪ್ರಯತ್ನಿಸುತ್ತಿದ್ದಾರೆ. ಆದರೆ ಇಂತಹ ಪ್ರಯತ್ನಗಳನ್ನು ದೇಶದ ಜನರು ಒಪ್ಪುವುದಿಲ್ಲ. ಕಾಂಗ್ರೆಸ್‌‍ಗೆ ನಿಜವಾಗಿಯೂ ಜನರ ವಿಶ್ವಾಸ ಗೆಲ್ಲುವ ಶಕ್ತಿ ಇದ್ದರೆ ಚುನಾವಣೆಗಳಲ್ಲಿ ಜನಾದೇಶ ಪಡೆದು ರಾಜ್ಯಗಳಲ್ಲಿ ಹಾಗೂ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಪ್ರಯತ್ನಿಸಬೇಕು.

ಅದರ ಬದಲಿಗೆ ಸುಳ್ಳುಗಳನ್ನು ಪದೇಪದೇ ಹೇಳಿ ಗೊಂದಲದ ವಾತಾವರಣ ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ದೊಡ್ಡನಗೌಡ ಪಾಟೀಲ್‌, ಮಾಜಿ ಸಚಿವ ರೇಣುಕಾಚಾರ್ಯ, ಎನ್‌. ರವಿಕುಮಾರ್‌ ಸೇರಿದಂತೆ ಪಕ್ಷದ ಮುಖಂ0ರು ಉಪಸ್ಥಿತರಿದ್ದರು.

RELATED ARTICLES
spot_img

Latest News