ಬೆಂಗಳೂರು,ನ.24- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡ ಇದೀಗ ಎರಡನೇ ಬಾರಿಗೆ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಬಳಿಕ ಇದೀಗ ಸಿಆರ್ಪಿಸಿ ಸೆಕ್ಷನ್ 439ರ ಅಡಿಯಲ್ಲಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಹೈಕೋರ್ಟ್ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ. ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅಲ್ಲಿಂದಲೇ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ.
ಪ್ರಕರಣದ ಪ್ರಮುಖ ಪ್ರತ್ಯಕ್ಷದರ್ಶಿಗಳೆಲ್ಲರೂ ಈಗಾಗಲೇ ತಮ್ಮ ಹೇಳಿಕೆಗಳನ್ನು ಬದಲಿಸಿ ಪ್ರತಿಕೂಲ ಸಾಕ್ಷಿಗಳಾಗಿ ಪರಿಣಮಿಸಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ತಮ ಕಕ್ಷಿದಾರರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ. ಹೀಗಾಗಿ ಸೂಕ್ತ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಬೇಕು ಎಂದು ಪವಿತ್ರಾ ಗೌಡ ಪರ ವಕೀಲರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಈ ಹಿಂದೆ ಸೆಪ್ಟೆಂಬರ್ 26ರಂದು 59ನೇ ಸೆಷನ್್ಸ ನ್ಯಾಯಾಲಯ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ವಕೀಲ ನಾರಾಯಣಸ್ವಾಮಿ ಅವರ ಮೂಲಕ ಹೈಕೋರ್ಟ್ಗೆ ಮತ್ತೊಮೆ ಜಾಮೀನು ಅರ್ಜಿ ಸಲ್ಲಿಸಲಾಗಿದೆ.
