Homeರಾಜ್ಯಶಾಶ್ವತ ನಿವಾಸಿ ಪ್ರಮಾಣ ಪತ್ರ ವಿತರಣೆಯಿಂದ ಕೇಂದ್ರದ ಅಧಿಕಾರ ವ್ಯಾಪ್ತಿಗೆ ಧಕ್ಕೆಯಾಗುವುದಿಲ್ಲ : ಪರಮೇಶ್ವರ್‌

ಶಾಶ್ವತ ನಿವಾಸಿ ಪ್ರಮಾಣ ಪತ್ರ ವಿತರಣೆಯಿಂದ ಕೇಂದ್ರದ ಅಧಿಕಾರ ವ್ಯಾಪ್ತಿಗೆ ಧಕ್ಕೆಯಾಗುವುದಿಲ್ಲ : ಪರಮೇಶ್ವರ್‌

Permanent Resident Certificate Issuance Will Not Impinge on Central Jurisdiction: Parameshwar

ಬೆಂಗಳೂರು, ಜು.21- ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ ರಾಜ್ಯ ಸರ್ಕಾರ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣ ಪತ್ರ ನೀಡುತ್ತಿರುವುದರಿಂದ ಕೇಂದ್ರ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸ್ಪಷ್ಟ ಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಪ್ರಮಾಣ ಪತ್ರಗಳನ್ನು ಮೊದಲಿನಿಂದಲೂ ತಹಸೀಲ್ದಾರ್‌ ನೀಡುತ್ತಿದ್ದರು. ಅದನ್ನೇ ನಾವು ಮುಂದುವರೆಸಿದ್ದೇವೆ. ಹೊಸದಾಗಿ ಯಾವುದೇ ವ್ಯವಸ್ಥೆಯನ್ನು ಜಾರಿ ಮಾಡಿಲ್ಲ ಎಂದರು.

ಎಸ್‌‍ಐಆರ್‌ ನಡೆಸುವ ಆಯೋಗದ 13 ದಾಖಲೆಗಳನ್ನು ಕೇಳಲಾಗಿದೆ. ಅದರಲ್ಲಿ ಶಾಶ್ವತ ನಿವಾಸಿ ಪ್ರಮಾಣ ಪತ್ರವೂ ಸೇರಿದೆ. 2002ರ ಮತದಾರರ ಪಟ್ಟಿಯಲ್ಲಿ ಕೆಲವರ ಹೆಸರು ಇರುವುದಿಲ್ಲ. ಅಂತಹವರಿಗೆ ಶಾಶ್ವತ ನಿವಾಸಿ ಪ್ರಮಾಣ ಪತ್ರದಿಂದ ಅನುಕೂಲವಾಗಲಿದೆ ಎಂದರು.

ರಾಜ್ಯದಲ್ಲಿ ಬಾಂಗ್ಲಾದೇಶಿರು ಹೆಚ್ಚಿದ್ದಾರೆ. ಅವರಿಗೆ ಪರಿತರ ಚೀಟಿ, ಆಧಾರ್‌ ಕಾರ್ಡ್‌ ನೀಡಲಾಗುತ್ತದೆ ಎಂದು ವಿರೋಧ ಪಕ್ಷದವರು ಹಲವು ಬಾರಿ ವಿಧಾನಮಂಡಲದಲ್ಲಿ ಚರ್ಚೆ ಮಾಡಿದ್ದಾರೆ. ಶಾಶ್ವತ ಪ್ರಮಾಣ ಪತ್ರ ನೀಡುವಾಗ ಬಾಂಗ್ಲಾದೇಶಿಯರನ್ನು ಪರಿಗಣಿಸಲು ಸಾಧ್ಯವಿಲ್ಲ. ಯಾರು ಬಾಂಗ್ಲಾದೇಶಿಯರು ಎಂದು ನಮಗೆ ಸ್ಪಷ್ಟವಾಗಿ ಗೊತ್ತಾಗುತ್ತದೆ.

ಅಂತಹವರಿಗೆ ಪ್ರಮಾಣ ಪತ್ರ ನೀಡುವುದಿಲ್ಲ. ಅದನ್ನು ಹೊರತು ಪಡಿಸಿ 10 ವರ್ಷಕ್ಕಿಂತ ಮೇಲ್ಪಟ್ಟು ಕರ್ನಾಟಕದಲ್ಲಿ ವಾಸಿಸುತ್ತಿರುವವರಿಗೆ ಪ್ರಮಾಣ ಪತ್ರ ನೀಡುತ್ತೇವೆ. ಇದರಿಂದ ಎಸ್‌‍ಐಆರ್‌ಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲು ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಇಂದು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್‌ ಅನುಮತಿ ನೀಡಿದರೆ ತಕ್ಷಣವೇ ರಾಜ್ಯಪಾಲರ ಸಮಯ ನೋಡಿಕೊಂಡು ಸಂಪುಟ ವಿಸ್ತರಣೆಯಾಗುತ್ತದೆ. ಯುವಕರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎಂಬ ಚರ್ಚೆಗಳು ನಡೆಯುತ್ತಿದೆ ಎಂದರು.

ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್‌ ಸಂಪುಟ ವಿಸ್ತರಣೆಗೆ ಮಾನದಂಡ ರೂಪಿಸಬಹುದು. ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು ಎಂಬುದು ಮೊದಲಿನಿಂದಲೂ ವರಿಷ್ಠರ ಆಶಯವಾಗಿದೆ ಎಂದರು.

ಬರ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಆರಂಭಿಸಲಾಗಿದೆ. ಸದ್ಯಕ್ಕೆ ಇನ್ನೂ ಪೀಡಿತ ತಾಲ್ಲೂಕುಗಳ ಘೋಷಣೆಯಾಗಿಲ್ಲ. ಸದ್ಯಕ್ಕೆ ಜನ ಗುಳೇ ಹೋಗದಂತೆ ತಡೆಯಲು ಸ್ಥಳೀಯ ಮಟ್ಟದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಆದ್ಯತೆ ನೀಡಲಾಗುತ್ತಿದೆ. ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದರು.

RELATED ARTICLES

Latest News