Homeರಾಜ್ಯವಚನಾನಂದ ಶ್ರೀ ವಿರುದ್ಧ ಪೋಕ್ಸೋ ಕೇಸ್ : ತನಿಖೆ ಆರಂಭಿಸಿದ ಪೊಲೀಸರು

ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಕೇಸ್ : ತನಿಖೆ ಆರಂಭಿಸಿದ ಪೊಲೀಸರು

POCSO case against Vachanananda Sri: Police start investigation

ದಾವಣಗೆರೆ,ಮೇ 13- ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀ ಅವರ ವಿರುದ್ಧ ಬಾಲಕನ ಮೇಲಿನ ದೌರ್ಜನ್ಯ ಆರೋಪದ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಘಟನೆ ಸಂಬಂಧ ಪೊಲೀಸ್‌‍ ತನಿಖೆ ಆರಂಭವಾಗಿದ್ದು, ದೂರುದಾರರು ಹಾಗೂ ಸಂಬಂಧಿತ ಸಾಕ್ಷ್ಯಗಳನ್ನು ಆಧರಿಸಿ ವಿಚಾರಣೆ ಮುಂದುವರಿದಿದೆ.

ಈ ಪ್ರಕರಣ ಮೊದಲು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿತ್ತು. ಆದರೆ ಆರೋಪಿತ ಘಟನೆ ನಡೆದಿರುವ ಸ್ಥಳ ಹರಿಹರ ಗ್ರಾಮಾಂತರ ಠಾಣೆಯ ವ್ಯಾಪ್ತಿಗೆ ಒಳಪಡುವುದರಿಂದ ಎಫ್‌ಐಆರ್‌ ಅನ್ನು ಅಲ್ಲಿಗೆ ವರ್ಗಾಯಿಸಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣವನ್ನು ಸ್ವೀಕರಿಸಿ ಅಧಿಕೃತ ತನಿಖೆ ಆರಂಭಿಸಿದ್ದಾರೆ.

ದೂರು ನೀಡಿದ ಮಹಿಳೆ, ಮಠದ ವಸತಿ ನಿಲಯದಲ್ಲಿ ವಾಸವಾಗಿದ್ದ ತನ್ನ ಮಗನಿಂದ ಸ್ವಾಮೀಜಿ ಮಸಾಜ್‌ ಮಾಡಿಸಿಕೊಳ್ಳುತ್ತಿದ್ದರು ಎಂಬ ಆರೋಪವನ್ನು ಮಾಡಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆ ಅವರು ಲಕ್ಷ್ಮೇಶ್ವರ ಠಾಣೆಗೆ ದೂರು ಸಲ್ಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆಯೇ ಪ್ರಕರಣ ದಾಖಲಾಗಿದೆ.

ಪೊಲೀಸರು ಈಗಾಗಲೇ ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಸಂತ್ರಸ್ತ ಬಾಲಕನ ಹೇಳಿಕೆಯನ್ನು ಸಹ ಅಧಿಕೃತವಾಗಿ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆಯನ್ನು ಎಚ್ಚರಿಕೆಯಿಂದ ಮುಂದುವರಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಪಂಚಮಸಾಲಿ ಪೀಠದ ಆಡಳಿತ ಮಂಡಳಿ ಸ್ವಾಮೀಜಿ ಅವರನ್ನು ಪೀಠದಿಂದ ಪದಚ್ಯುತಗೊಳಿಸಿರುವ ವಿಷಯವೂ ಬೆಳಕಿಗೆ ಬಂದಿದೆ. ಮಠದ ಆಂತರಿಕ ಕಾರ್ಯ ಚಟುವಟಿಕೆಗಳಲ್ಲಿ ಮಕ್ಕಳಿಂದ ಸೇವೆ ಪಡೆಯುವ ಕುರಿತು ಮೊದಲು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಲ್ಲಿನ ಮಕ್ಕಳ ಹಾಗೂ ಸಂಬಂಧಿತ ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಿದೆ ಎಂದು ತಿಳಿದುಬಂದಿದೆ.

ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಮಗನಿಂದ ಶ್ರೀ ವಚನಾನಂದ ಸ್ವಾಮೀಜಿ ಮಸಾಜ್‌ ಮಾಡಿಕೊಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿ ತಾಯಿಯೊಬ್ಬರು ಲಕ್ಷ್ಮೇಶ್ವರ ಪೊಲೀಸ್‌‍ ಠಾಣೆಯಲ್ಲಿ ದೂರು ನೀಡಿದ್ದರು. ಈ ಹರಿಹರ ಗ್ರಾಮಾಂತರ ಪೊಲೀಸ್‌‍ ಠಾಣೆಗೆ ವರ್ಗಾವಣೆಯಾಗಿದ್ದು, ತನಿಖೆ ಈಗಾಗಲೇ ಪ್ರಾರಂಭಿಸಲಾಗಿದೆ. ಸಂತ್ರಸ್ತ ಬಾಲಕನ ಹೇಳಿಕೆಯನ್ನು ಪಡೆಯಲಿದ್ದೇವೆ ಎಂದು ಜಿಲ್ಲಾ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಡಾ.ಎಚ್‌.ಟಿ.ಶೇಖರ್‌ ಮಾಹಿತಿ ನೀಡಿದ್ದಾರೆ.

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠ ಟ್ರಸ್ಟ್‌ ಶ್ರೀ ವಚನಾನಂದ ಸ್ವಾಮೀಜಿ ಇತ್ತೀಚೆಗೆ ಗುರುಪೀಠದಿಂದ ಪದಚ್ಯುತಿಗೊಳಿಸಲಾಗಿತ್ತು. ಗುರುಪೀಠದಲ್ಲಿ ಇದ್ದ ಮಕ್ಕಳಿಂದ ಮಸಾಜ್‌ ಮಾಡಿಸಿಕೊಳ್ಳುತ್ತಿದ್ದರು ಎಂದು ಸ್ವಾಮೀಜಿ ಪದಚ್ಯುತಿಗೊಳಿಸಿದ ಬಳಿಕ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಗುರುಪೀಠಕ್ಕೆ ಭೇಟಿ ನೀಡಿ ಶ್ರೀ ವಚನಾನಂದ ಸ್ವಾಮೀಜಿ ಸೇರಿದಂತೆ ಕೆಲವರ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗಿತ್ತು.

RELATED ARTICLES

Latest News