ಬೆಂಗಳೂರು, ಜ.7- ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಅವಮಾನ ಮಾಡಿದ ಹಿನ್ನೆಲೆಯಲ್ಲಿ ತಕ್ಷಣವೇ ಘಟನೆಗ ಕಾರಣರಾದ ಪೊಲೀಸರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದ್ದರೆ ಮಹಿಳೆಯ ಮೇಲೆ ಕಾನೂನು ಪ್ರಕಾರ ಶಿಕ್ಷೆಯಾಗಲಿ. ಆದರೆ ಕಾನೂನನ್ನು ರಕ್ಷಣೆ ಮಾಡಬೇಕಾದ ಪೊಲೀಸರೇ ವಿವಸ್ತ್ರಗೊಳಿಸಿ ರಾಕ್ಷಸರಂತೆ ವರ್ತಿಸಿರುವುದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಗೃಹಸಚಿವ ಡಾ.ಜಿ.ಪರಮೇಶ್ವರ್ ತಕ್ಷಣವೇ ಮಧ್ಯಪ್ರವೇಶ ಮಾಡಬೇಕು. ಅವರು ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಿ. ಯಾರೇ ಭಾಗಿಯಾಗಿದ್ದರೂ ಅವರನ್ನು ಕಾನೂನು ಪ್ರಕಾರ ಶಿಕ್ಷೆಗೊಳಪಡಿಸಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಕಾರ್ಪೋರೇಟರ್ ದೂರಿನ ಮೇಲೆ ಸುಜಾತಾ ಅವರನ್ನು ಬಂಧಿಸಿ ಪೊಲೀಸರು ಅಮಾನವಿಯವಾಗಿ ನಡೆಸಿಕೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಇದು ಮಹಿಳಾ ದೌರ್ಜನ್ಯ. ಕೂಡಲೇ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು.ಇವರು ರಾಜಕೀಯ ಅಧಿಕಾರವನ್ನು ಬಳಸಿಕೊಂಡಿದ್ದಾರೆ. ಮಾನವೀಯ ಜಗತ್ತು ತಲೆ ತಗ್ಗಿಸುವಂತೆ ನಡೆದುಕೊಂಡಿದ್ದಾರೆ. ಮಳಾ ಅಯೋಗ ಸುಮೋಟೋ ಕೇಸ್ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸುಳ್ಳು ದೂರು ನೀಡಿರುವ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧವೂ ಕ್ರಮ ಆಗಬೇಕು. ಪೊಲೀಸರ ಕೃತ್ಯಕ್ಕೆ ಪ್ರಾಯಶ್ಚಿತ್ತ ಇಲ್ಲ. ಪೊಲೀಸರು ಕಾಂಗ್ರೆಸ್ ಕಾರ್ಪೋರೇಟರ್ ಅಡಿಯಾಳಿನಂತೆ ಕೆಲಸ ಮಾಡಿದ್ದಾರೆ. ಈ ಕೂಡಲೇ ಪೊಲೀಸರು, ಕಾಂಗ್ರೆಸ್ ಕಾರ್ಪೋರೇಟರ್ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಕಚೇರಿಯಲ್ಲಿ ವಿಧಾನ ಪರಿಷತ್ ಸಚೇತಕ ರವಿಕುಮಾರ್‌ರವರು ಪ್ರತಿಕ್ರಯಿಸಿ, ಕಾಂಗ್ರೆಸ್ ಕುಮಕ್ಕಿನ ಕಾರಣದಿಂದ ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲೆ ದೌರ್ಜನ್ಯ ಮಾಡಿದ್ದಾರೆ. ಮಳೆಯನ್ನು ವಸ್ತಗೊಳಿಸಿ ದೌರ್ಜನ್ಯ ಮಾಡಿರುವುದು ಸರ್ಕಾರಕ್ಕೆ ಗೌರವ ತರುವುದಿಲ್ಲ. ಇಲ್ಲಿ ಮಳೆಯರ ಶೀಲದ ಪ್ರಶ್ನೆ ಬಂದಿದೆ. ಯಾರು ಅಮಾನೕಯವಾಗಿ ನಡೆದುಕೊಂಡ ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
